ವಿಶಾಖಪಟ್ಟಣಂ:ಎರಡನೇ ಕ್ವಾಲಿಫೈಯರ್ನಲ್ಲಿಡೆಲ್ಲಿ ಕ್ಯಾಪಿಟಲ್ಸ್ ನೀಡಿದ್ದ 148 ರನ್ಗಳ ಗುರಿಯನ್ನು ಸಮರ್ಥವಾಗಿ ಬೆನ್ನತ್ತಿ ಆರು ವಿಕೆಟ್ಗಳ ಜಯ ಸಾಧಿಸುವ ಮೂಲ ಚೆನ್ನೈ ಸೂಪರ್ ಕಿಂಗ್ಸ್ 12ನೇ ಆವೃತ್ತಿಯ ಐಪಿಎಲ್ ಟೂರ್ನಿಯಲ್ಲಿ ಎರಡನೇ ತಂಡವಾಗಿ ಉಪಾಂತ್ಯ ಪ್ರವೇಶಿಸಿದೆ.
ಸಾಧಾರಣ ಗುರಿಯನ್ನು ಬೆನ್ನಟ್ಟಿದ ಚೆನ್ನೈಗೆ ಆರಂಭಿಕರಾದ ಶೇನ್ ವ್ಯಾಟ್ಸನ್ ಹಾಗೂ ಫಫ್ ಡು ಪ್ಲೆಸಿಸ್ ಭರ್ಜರಿ ಆರಂಭ ನೀಡಿದರು. ಇಬ್ಬರೂ ಆಟಗಾರರು 50 ರನ್ ಗಳಿಸಿ ಪೆವಿಲಿಯನ್ ಸೇರಿದರು.
ಮಧ್ಯಮ ಕ್ರಮಾಂಕದಲ್ಲಿ ಸುರೇಶ್ ರೈನಾ 11 ರನ್ ಗಳಿಸಿ ಔಟಾದರು. ಕೊನೆಯಲ್ಲಿ ಅಂಬಟಿ ರಾಯುಡು(20) ತಂಡಕ್ಕೆ ಅರ್ಹ ಜಯ ತಂದಿತ್ತರು.