ವಿಶಾಖಪಟ್ಟಣಂ:ಪ್ರಸಕ್ತ ಐಪಿಎಲ್ ಟೂರ್ನಿ ಕೊನೇ ಹಂತಕ್ಕೆ ಬಂದಿದ್ದು, ಇಂದಿನ ನಿರ್ಣಾಯಕ ಎರಡನೇ ಕ್ವಾಲಿಫೈಯರ್ನಲ್ಲಿ ಟಾಸ್ ಗೆದ್ದಿರುವ ಚೆನ್ನೈ ಸೂಪರ್ ಕಿಂಗ್ಸ್ ಬೌಲಿಂಗ್ ಆಯ್ದುಕೊಂಡಿದೆ.
ಡೆಲ್ಲಿ ಕ್ಯಾಪಿಟಲ್ಸ್ ತಮ್ಮ ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಕೊಳ್ಳದೆ ಹಿಂದಿನ ಪಂದ್ಯದ ತಂಡವನ್ನೇ ಕಣಕ್ಕಿಳಿಸಿದೆ. ಅತ್ತ ಚೆನ್ನೈ ಒಂದು ಚೇಂಜ್ ಮಾಡಿಕೊಂಡಿದ್ದು, ಮುರಳಿ ವಿಜಯ್ ಬದಲಿಗೆ ಶಾರ್ದೂಲ್ ಠಾಕೂರ್ರನ್ನು ಕರೆಸಿಕೊಂಡಿದೆ.
ಇಂದಿನ ಈ ಪಂದ್ಯ ಎರಡೂ ತಂಡಕ್ಕೂ ಮಾಡು ಇಲ್ಲವೇ ಮಡಿ ಆಗಿದ್ದು, ಸೋತವರು ಟೂರ್ನಿಯಿಂದ ಹೊರಬೀಳಲಿದ್ದಾರೆ. ವಿಜೇತ ತಂಡ ಮೇ 12ರಂದು ನಡೆಯಲಿರುವ ಫೈನಲ್ನಲ್ಲಿ ಮುಂಬೈ ಇಂಡಿಯನ್ಸ್ ತಂಡವನ್ನು ಎದುರಿಸಲಿದೆ.
ಚೆನ್ನೈ ಸೂಪರ್ ಕಿಂಗ್ಸ್:
ಶೇನ್ ವಾಟ್ಸನ್, ಫಾಫ್ ಡುಪ್ಲೆಸಿಸ್, ಸುರೇಶ್ ರೈನಾ, ಅಂಬಾಟಿ ರಾಯುಡು, ಎಂ.ಎಸ್ ಧೋನಿ(ಕ್ಯಾಪ್ಟನ್), ರವೀಂದ್ರ ಜಡೇಜಾ, ಡ್ವೇನ್ ಬ್ರಾವೋ, ದೀಪಕ್ ಚಹರ್, ಹರ್ಭಜನ್ ಸಿಂಗ್, ಇಮ್ರಾನ್ ತಾಹಿರ್, ಶಾರ್ದೂಲ್ ಠಾಕೂರ್
ಡೆಲ್ಲಿ ಕ್ಯಾಪಿಟಲ್ಸ್:
ಪೃಥ್ವಿ ಶಾ, ಶಿಖರ್ ಧವನ್, ಶ್ರೇಯಸ್ ಅಯ್ಯರ್(ಕ್ಯಾಪ್ಟನ್), ರಿಷಭ್ ಪಂತ್, ಕಾಲಿನ್ ಮನ್ರೋ, ಶೆರ್ಫಾನೆ ರುದರ್’ಫೋರ್ಡ್, ಅಕ್ಷರ್ ಪಟೇಲ್, ಕೀಮೋ ಪೌಲ್, ಟ್ರೆಂಟ್ ಬೌಲ್ಟ್, ಅಮಿತ್ ಮಿಶ್ರಾ, ಇಶಾಂತ್ ಶರ್ಮಾ