ನವದೆಹಲಿ:ಪ್ರಧಾನಿ ಮೋದಿ ವಿರುದ್ಧ 'ಚೌಕಿದಾರ್ ಚೋರ್ ಹೈ' ಎಂಬ ಪದವನ್ನ ಪದೇಪದೆ ಬಳಕೆ ಮಾಡುತ್ತಿದ್ದ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸುಪ್ರೀಂಕೋರ್ಟ್ನಲ್ಲಿ ಈಗ ವಿಷಾದ ವ್ಯಕ್ತಪಡಿಸಿದ್ದಾರೆ.
ಚೌಕಿದಾರ್ ಚೋರ್ ಹೈ ಹೇಳಿಕೆ : ಸುಪ್ರೀಂನಲ್ಲಿ ವಿಷಾದ ವ್ಯಕ್ತಪಡಿಸಿದ ರಾಹುಲ್ ಗಾಂಧಿ!
ದೇಶದ ರಕ್ಷಣಾ ವ್ಯವಸ್ಥೆಯಲ್ಲಿ ರಫೇಲ್ ಡೀಲ್ಗೆ ಸಂಬಂಧಿಸಿದಂತೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್ ಗಾಂಧಿ, ಪದೇಪದೆ ಚೌಕಿದಾರ್ ಚೋರ್ ಹೈ ಎಂದು ಮೂದಲಿಸುತ್ತಿದ್ದರು.
ರಫೇಲ್ ಡೀಲ್ ವಿಚಾರಕ್ಕೆ ಸಂಬಂಧಿಸಿದಂತೆ ಪ್ರಧಾನಿ ವಿರುದ್ಧ ವಾಗ್ದಾಳಿ ನಡೆಸಿದ್ದ ರಾಹುಲ್, ಚೌಕಿದಾರ್ ಚೋರ್ ಹೈ ಎಂಬ ಪದ ಬಳಕೆ ಮಾಡಿದ್ದರು. ಜತೆಗೆ ಚುನಾವಣಾ ಸಮಾರಂಭಗಳಲ್ಲೂ ಕೂಡ ಈ ಪದ ಬಳಿಕೆ ಮಾಡಿದ್ದರು. ಹೀಗಾಗಿ ಇದೇ ವಿಷಯವನ್ನಿಟ್ಟುಕೊಂಡು ಬಿಜೆಪಿ ಎಂಪಿ ಮೇನಾಕ್ಷಿ ಲೇಖಿ ಸುಪ್ರೀಂಕೋರ್ಟ್ ಮೊರೆ ಹೋಗಿದ್ದರು. ಈ ಬಗ್ಗೆ ಪರಿಶೀಲನೆ ನಡೆಸಿದ ಸುಪ್ರೀಂಕೋರ್ಟ್ ರಾಹುಲ್ ಗಾಂಧಿಯವರಿಗೆ ನೋಟಿಸ್ ಜಾರಿ ಮಾಡಿತ್ತು. ಏಪ್ರಿಲ್ 22ರೊಳಗೆ ಸ್ಪಷ್ಟನೆ ನೀಡುವಂತೆಯೂ ಸೂಚನೆ ನೀಡಿತ್ತು. ಕೇಂದ್ರ ಚುನಾವಣಾ ಆಯೋಗಕ್ಕೆ ಬಿಜೆಪಿ ರಾಹುಲ್ ಗಾಂಧಿ ವಿರುದ್ಧ ದೂರು ಸಹ ನೀಡಿತ್ತು.ಇದೀಗ ರಾಹುಲ್ ಗಾಂಧಿ ಆ ರೀತಿ ಹೇಳಿಕೆ ನೀಡಿದ್ದಕ್ಕೆ ವಿಷಾದ ವ್ಯಕ್ತಪಡಿಸುವುದಾಗಿ ತಿಳಿಸಿದ್ದಾರೆ. ಇದೇ ವೇಳೆ ತಮ್ಮ ಹೇಳಿಕೆಯನ್ನ ತಿರುಚಿ ಈ ರೀತಿಯಾಗಿ ಬಿತ್ತರಿಸಲಾಗಿದೆ ಎಂದಿದ್ದಾರೆ.