ನವದೆಹಲಿ:ಲೋಕಸಭಾ ಚುನಾವಣೆಯಲ್ಲಿ ಹೀನಾಯ ಸೋಲು ಹಾಗು ರಾಹುಲ್ ರಾಜೀನಾಮೆ ವಿಚಾರ ಸಂಬಂಧ ಕಾಂಗ್ರೆಸ್ ಇಂದು ಕಾರ್ಯಕಾರಿ ಸಮಿತಿ ಸಭೆ ನಡೆಸಿತು. ಈ ಮಹತ್ವದ ಸಭೆಯಲ್ಲಿ ಪಕ್ಷದ ಹಿರಿಯ ನಾಯಕರು ಪಾಲ್ಗೊಂಡಿದ್ದು, ಎಐಸಿಸಿ ಅಧ್ಯಕ್ಷ ಸ್ಥಾನಕ್ಕೆ ರಾಹುಲ್ ನೀಡಿದ ರಾಜೀನಾಮೆಯನ್ನು ಸರ್ವಾನುಮತದಿಂದ ತಿರಸ್ಕರಿಸಲಾಗಿದೆ.
ಕಾರ್ಯಕಾರಣಿಯಲ್ಲಿ ರಾಹುಲ್ ಗಾಂಧಿ ಅವರು ನೀಡಿದ ರಾಜೀನಾಮೆಯನ್ನು ತಿರಸ್ಕರಿಸಲಾಗಿದ್ದು, ಅವರ ಸಲಹೆ ಮತ್ತು ಮಾರ್ಗದರ್ಶನ ಪಕ್ಷಕ್ಕೆ ಬೇಕಾಗಿದೆ. ಅವರು ಅಧ್ಯಕ್ಷ ಸ್ಥಾನದಲ್ಲೇ ಮುಂದುವರೆಯಲಿದ್ದಾರೆ ಎಂದು ಕಾರ್ಯಕಾರಣಿ ಬಳಿಕ ನಡೆದ ಪತ್ರಿಕಾಗೋಷ್ಟಿಯಲ್ಲಿ ವಕ್ತಾರ ರಣದೀಪ್ ಸುರ್ಜೇವಾಲ ಮಾಹಿತಿ ನೀಡಿದರು.
ಸಿಡಬ್ಲ್ಯುಸಿ ಸಭೆಯಲ್ಲಿ ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಉತ್ತರ ಪ್ರದೇಶ ಉಸ್ತುವಾರಿ ಪ್ರಿಯಾಂಕ ಗಾಂಧಿ, ಪಂಜಾಬ್, ರಾಜಸ್ಥಾನ, ಮಧ್ಯಪ್ರದೇಶ, ಛತ್ತೀಸಗಢ್, ಪಾಂಡಿಚೇರಿ ಸಿಎಂಗಳು ಭಾಗಿಯಾಗಿದ್ದರು.