ಕರ್ನಾಟಕ

karnataka

ETV Bharat / briefs

ರಾಣೆಬೆನ್ನೂರು ಎಪಿಎಂಸಿ ಅಧ್ಯಕ್ಷ ಪಟ್ಟ ಮತ್ತೆ 'ಕೈ' ವಶ - Ranebennuru apmc election

ರಾಣೆಬೆನ್ನೂರು ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆ ಮುಕ್ತಾಯವಾಗಿದ್ದು, ಮತ್ತೆ ಕಾಂಗ್ರೆಸ್ ಪಕ್ಷ ಗೆಲುವಿನ ನಗೆ ಬೀರಿದೆ.

Ranebennuru apmc prasident election result
Ranebennuru apmc prasident election result

By

Published : Jun 15, 2020, 3:17 PM IST

ಹಾವೇರಿ: ತೀವ್ರ ಕುತೂಹಲ ಮೂಡಿಸಿದ್ದ ರಾಣೆಬೆನ್ನೂರು ಕೃಷಿ ಉತ್ಪನ್ನ ಮಾರುಕಟ್ಟೆ ಅಧ್ಯಕ್ಷ ಸ್ಥಾನ ಮತ್ತೆ ಕಾಂಗ್ರೆಸ್ ತೆಕ್ಕೆಗೆ ಬಂದಿದೆ.

ಎಪಿಎಂಸಿ ಸಭಾಂಗಣದಲ್ಲಿ ನಡೆದ ಅಧ್ಯಕ್ಷರು ಮತ್ತು ಉಪಾಧ್ಯಕ್ಷರ ಚುನಾವಣೆಯಲ್ಲಿ ಹೊನ್ನತ್ತಿ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಸವಣೂರು 9 ಮತಗಳನ್ನು ಪಡೆಯುವ ಮೂಲಕ ಅಧ್ಯಕ್ಷರಾದರೆ, ಉಪಾಧ್ಯಕ್ಷರಾಗಿ ಸುರೇಶ ಬೀರಾಳ ಆಯ್ಕೆಯಾದರು.

ಒಟ್ಟು 17 ಸದಸ್ಯರ ಬಲ ಹೊಂದಿದ್ದ ಎಪಿಎಂಸಿ ಅಧ್ಯಕ್ಷ ಗಾದಿಗೆ ಕಾಂಗ್ರೆಸ್ ಪಕ್ಷದ 9 ಸದಸ್ಯರು ಅಭ್ಯರ್ಥಿ ಪರವಾಗಿ ಮತ ಚಲಾಯಿಸುವ ಮೂಲಕ ಆಯ್ಕೆ ಮಾಡಿದ್ದಾರೆ. ಬಿಜೆಪಿ 8 ಸದಸ್ಯರನ್ನು ಹೊಂದಿದ್ದು, ಇದರಲ್ಲಿ 8 ಸದಸ್ಯರು ಮಾತ್ರ ಬಿಜೆಪಿ ಅಭ್ಯರ್ಥಿ ಪರ ಮತ ಹಾಕಿದ್ದಾರೆ. ಕೇವಲ ಒಂದು ಮತದ ಅಂತರದಲ್ಲಿ ಎಪಿಎಂಸಿ ಗಾದಿ ಕಾಂಗ್ರೆಸ್ ವಶವಾಗಿದೆ.

ರಾಣೆಬೆನ್ನೂರು ಎಪಿಎಂಸಿ ಅಧ್ಯಕ್ಷ ಗಾದಿ 'ಕೈ' ವಶ
ಚುನಾವಣಾಧಿಕಾರಿ ತಹಶೀಲ್ದಾರ್​ ಬಸವನಗೌಡ ಕೊಟೂರು ಅಧಿಕೃತವಾಗಿ ಬಸವರಾಜ ಸವಣೂರು ಅವರು ಎಪಿಎಂಸಿ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಘೋಷಣೆ ಮಾಡಿದರು.ಬಸವರಾಜ ಸವಣೂರ ಮಾತನಾಡಿ, ರೈತರ ಸಮಸ್ಯೆಗಳನ್ನು ತ್ವರಿತಗತಿಯಲ್ಲಿ ಬಗೆಹರಿಸಲಾಗುವುದು. ರೈತರಿಗೆ ಸಿಗುವ ಸೌಲಭ್ಯಗಳನ್ನು ಅವರಿಗೆ ನೇರವಾಗಿ ತಲುಪುವ ರೀತಿಯಲ್ಲಿ ಅವಕಾಶ ಕಲ್ಪಿಸಲಾಗುವುದು. ರಾಣೆಬೆನ್ನೂರು ಹೊರವಲಯದಲ್ಲಿ ನಿರ್ಮಾಣವಾಗುತ್ತಿರುವ ಮೆಗಾ ಮಾರುಕಟ್ಟೆ ಅಭಿವೃದ್ಧಿಗೆ ಹೆಚ್ಚು ಒತ್ತು ನೀಡಿ, ಸರ್ಕಾರದಿಂದ ಇನ್ನಷ್ಟು ಅನುದಾನ ತರುವ ಮೂಲಕ ಅಭಿವೃದ್ಧಿ ಮಾಡುತ್ತೇನೆ ಎಂದು ಭರವಸೆ ನೀಡಿದರು.

ABOUT THE AUTHOR

...view details