ಕಾರವಾರ:ಮೂತ್ರ ವಿಸರ್ಜನೆಗೆ ತೆರಳಿದ್ದ ಅತ್ಯಾಚಾರ ಆರೋಪಿಯೊಬ್ಬ ಪರಾರಿಯಾಗಿರುವ ಘಟನೆ ಕುಮಟಾ ಪಟ್ಟಣದಲ್ಲಿ ನಡೆದಿದೆ.
ಬಾಲಕಿಯ ಮೇಲೆ ಅತ್ಯಾಚಾರವೆಸಗಿ ಪೋಕ್ಸೋ ಕಾಯ್ದೆಯಡಿ ಬಂಧನಕ್ಕೊಳಗಾಗಿದ್ದ ಈಶ್ವರ ಮುಕ್ರಿ (22) ಯನ್ನು ಕಾರವಾರ ನ್ಯಾಯಾಧೀಶರ ಮುಂದೆ ಹಾಜರುಪಡಿಸಲು ಹೊನ್ನಾವರ ಪೊಲೀಸ್ ಠಾಣೆಯಿಂದ ವಾಹನದಲ್ಲಿ ಕರೆದೊಯ್ಯಲಾಗುತ್ತಿತ್ತು.