ಕರ್ನಾಟಕ

karnataka

ETV Bharat / briefs

ಬಾಕಿ ವೇತನ ಪಾವತಿಸಲು ಅಂಗನವಾಡಿ ಕಾರ್ಯಕರ್ತೆಯರ ಆಗ್ರಹ: ಮನವಿ

ಬಾಕಿ ವೇತನ ಪಾವತಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಮನವಿ ಸಲ್ಲಿಸಲಾಯಿತು.

Anganavadi workers
Anganavadi workers

By

Published : Jul 15, 2020, 2:21 PM IST

ಬಸವಕಲ್ಯಾಣ : ಅಂಗನವಾಡಿ ಕಾರ್ಯಕರ್ತೆಯರ ಮತ್ತು ಸಹಾಯಕಿಯರ ಬಾಕಿ ವೇತನವನ್ನು ಪಾವತಿಸಬೇಕು, ಗೌರವ ಧನವನ್ನು ಪ್ರತಿ ತಿಂಗಳು 5ನೇ ತಾರೀಖಿನ ಒಳಗಾಗಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಈಡೇರಿಸುವಂತೆ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಒತ್ತಾಯಿಸಲಾಯಿತು.

ರಾಜ್ಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಿಗೆ ಬರೆದ ಮನವಿ ಪತ್ರವನ್ನು ನಿನ್ನೆ ಇಲ್ಲಿನ ಸಿಡಿಪಿಒ ಕಚೇರಿಗೆ ಸಲ್ಲಿಸಿದ ಕಾರ್ಯಕರ್ತೆಯರು, ಎಲ್‌ಕೆಜಿ ಮತ್ತು ಯುಕೆಜಿ ತರಗತಿ ಅಂಗನವಾಡಿ ಕೇಂದ್ರಗಳಲ್ಲಿ ನಡೆಸಬೇಕು. ಕಾರ್ಯಕರ್ತೆಯರ ಸಂರಕ್ಷಣೆ, ನಿವೃತ್ತಿ ಸೌಲಭ್ಯ ಹಾಗೂ ವೇತನ ಹೆಚ್ಚಿಸಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರದಿಂದ 2018 ಅಕ್ಟೋಬರ್‌ನಿಂದ 1,500 ಮತ್ತು ರಾಜ್ಯ ಸರ್ಕಾರದಿಂದ 500 ಸೇರಿ ಒಟ್ಟು 2000 ಗೌರವ ಧನ ಬಾಕಿ ವೇತನ ಪಾವತಿಸಬೇಕು ಎಂದು ಮನವಿ ಮಾಡಲಾಯಿತು.

ಕೊರೊನಾ ಹಿನ್ನೆಲೆ ಅಂಗನವಾಡಿ ಕೇಂದ್ರಗಳಿಗೆ ಮತ್ತು ನೌಕರರಿಗೆ ಗುಣಮಟ್ಟದ ಸ್ಯಾನಿಟೈಸರ್, ಮಾಸ್ಕ್, ಪಿಪಿಎ ಕಿಟ್ ಒದಗಿಸಬೇಕು ಸೇರಿದಂತೆ ಹಲವು ಬೇಡಿಕೆ ಈಡೇರಿಸುವಂತೆ ಮನವಿ ಮಾಡಿದರು.

ಈ ವೇಳೆ, ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಶ್ರೀದೇವಿ ಚಿವಡೆ, ಉಪಾಧ್ಯಕ್ಷೆ ಫುಲಾಬಾಯಿ, ಖಜಾಂಚಿ ಸುಪ್ರಿಯಾ, ಪಾರ್ವತಿ, ಮಧುಮತಿ, ಜೈಶ್ರೀ, ದಯಾವತಿ, ನಂದು, ಶೀಲಾ ಹಾಗೂ ಸಂಘದ ಪದಾಧಿಕಾರಿಗಳು, ಅಂಗನವಾಡಿ ನೌಕರರು ಉಪಸ್ಥಿತರಿದ್ದರು.

ABOUT THE AUTHOR

...view details