ಬೆಂಗಳೂರು: 5 ದಿನಗಳ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ನೊಬ್ಬನನ್ನು ದುಷ್ಕರ್ಮಿಗಳು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನ ಹನುಮಂತನಗರದ ಕಾಳಿದಾಸ ಸರ್ಕಲ್ ಬಳಿ ನಡೆದಿದೆ.
ಬೆಂಗಳೂರಿನಲ್ಲಿ 5 ದಿನಗಳ ಹಿಂದೆಯಷ್ಟೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ ಕೊಲೆ - 20 year rowdy sheeter
5 ದಿನಗಳ ಹಿಂದೆಯಷ್ಟೇ ಜೈಲಿನಿಂದ ಹೊರಬಂದಿದ್ದ 20 ವರ್ಷದ ರೌಡಿಶೀಟರ್ನನ್ನು ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
rowdy-sheeter
ಭರತ್( 20) ಎಂಬಾತನೆ ಕೊಲೆಯಾದ ರೌಡಿಶೀಟರ್. ಈತ ಹನುಮಂತನಗರದ ಕಾಳಿದಾಸ ಸರ್ಕಲ್ ಬಳಿ ರಾತ್ರಿ 9 ಗಂಟೆ ವೇಳೆ ಬೈಕ್ನಲ್ಲಿ ಹೋಗುತ್ತಿದ್ದ ವೇಳೆ ಇಬ್ಬರು ದುಷ್ಕರ್ಮಿಗಳು ಅಡ್ಡಗಟ್ಟಿ ಚಾಕುವಿನಿಂದ ಇರಿದು ಕೊಲೆಮಾಡಿ ಪರಾರಿಯಾಗಿದ್ದಾರೆ.
ಹಳೇ ದ್ವೇಷದ ಹಿನ್ನೆಲೆ ಭರತ್ನನ್ನ ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಸದ್ಯ ಹನುಮಂತನಗರ ಪೊಲೀಸರು ಕೊಲೆ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ ಎಂದು ಡಿಸಿಪಿ ಅಣ್ಣಾಮಲೈ ತಿಳಿಸಿದ್ದಾರೆ.