ಕರ್ನಾಟಕ

karnataka

ETV Bharat / briefs

ಜಿಲ್ಲಾ ಪಂಚಾಯತಿ ಇಂಜಿನಿಯರ್ ಮೇಲೆ ಮೂರು ಠಾಣೆಗಳಲ್ಲಿ ಪ್ರತ್ಯೇಕ ಪ್ರಕರಣ - Illegal in work at gangavati

ಕನಕಗಿರಿ ಕ್ಷೇತ್ರದಲ್ಲಿ ಕೈಗೊಂಡಿದ್ದ ಕಾಮಗಾರಿಗಳಲ್ಲಿ ಕೋಟ್ಯಂತರ ರೂ ಅಕ್ರಮ ನಡೆದಿದ್ದು, ಈ ಸಂಬಂಧ ಜಿಲ್ಲಾ ಪಂಚಾಯತ್ ಇಂಜಿನಿಯರ್ ಮೇಲೆ ಮೂರು ರಾಣೆಗಳಲ್ಲಿ ಪ್ರತ್ಯೇಕ ಕೇಸ್ ದಾಖಲಾಗಿದೆ.

Gangavati
Gangavati

By

Published : Jun 17, 2020, 5:10 PM IST

Updated : Jun 17, 2020, 5:26 PM IST

ಗಂಗಾವತಿ:ಪ್ರವಾಹ ಪರಿಹಾರ ಕಾಮಗಾರಿಗಳಲ್ಲಿ ಅಕ್ರಮ ನಡೆದಿದೆ ಎಂದು ಆರೋಪಿಸಿ ಜಿಲ್ಲಾ ಪಂಚಾಯಿತಿ ಸಿಇಒ ಸೂಚನೆ ಮೇರೆಗೆ ಜಿ.ಪಂ.ಇಂಜಿನಿಯರ್ ಮೇಲೆ ಮೂರು ಠಾಣೆಗಳಲ್ಲಿ ಪ್ರತ್ಯೇಕ ಕೇಸ್‌ ದಾಖಲಾಗಿದೆ.

ಸಿಇಒ ರಘುನಂದನ್ ಮೂರ್ತಿ ಸೂಚನೆ ಮೇರೆಗೆ ಇಲ್ಲಿನ ಜಿಲ್ಲಾ ಪಂಚಾಯತಿ ಇಂಜಿನಿಯರಿಂಗ್ ಉಪ ವಿಭಾಗದ ಕಿರಿಯ ಇಂಜಿನಿಯರ್ ಡಿ.ಎಂ. ರವಿ ಮೇಲೆ ಪ್ರಕರಣ ದಾಖಲಾಗಿದೆ.

ಎಫ್​ಐಆರ್​ ಪ್ರತಿ

ಕನಕಗಿರಿ ಕ್ಷೇತ್ರದಲ್ಲಿ ಕೈಗೊಂಡಿದ್ದ ಕಾಮಗಾರಿಗಳಲ್ಲಿ ಕೋಟ್ಯಂತರ ರೂ. ಅಕ್ರಮ ನಡೆದಿರುವುದು ತನಿಖೆಯಿಂದ ಬಯಲಾಗಿದೆ. ಈ ಹಿನ್ನೆಲೆಯಲ್ಲಿ ತಾಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಡಾ.ಮೋಹನ್ ಎಂಬುವವರು ಕನಕಗಿರಿ ಹಾಗೂ ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ. ಇದರ ಜೊತೆಗೆ, ಕಾರಟಗಿ ಪೊಲೀಸ್ ಠಾಣೆಯಲ್ಲಿ ತಾ.ಪಂ ಸಿಇಒ ಚಂದ್ರಶೇಖರ ಪ್ರತ್ಯೇಕವಾಗಿ ದೂರು ದಾಖಲಿಸಿದ್ದಾರೆ.

Last Updated : Jun 17, 2020, 5:26 PM IST

ABOUT THE AUTHOR

...view details