ಉಡುಪಿ:ಜಿಲ್ಲೆಯ ಮೂಳೂರು ಬಳಿ ರಾಷ್ಟ್ರೀಯ ಹೆದ್ದಾರಿ 66 ರಲ್ಲಿಸಂಭವಿಸಿದಸರಣಿ ಅಪಘಾತದಲ್ಲಿ ಓರ್ವ ಮಹಿಳೆ ಸಾವನ್ನಪ್ಪಿದ್ದಾಳೆ.
ಕಾರು ಚಾಲಕನ ನಿರ್ಲಕ್ಷ್ಯಕ್ಕೆ ಸರಣಿ ಅಪಘಾತ: ಮಹಿಳೆ ಸಾವು, ನಾಲ್ವರಿಗೆ ಗಾಯ - undefined
ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿಗೆ ಬಂದ ಕಾರೊಂದು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮವಾಗಿ ಎರಡು ಆಟೋ ರಿಕ್ಷಾಗಳು ಸಹ ಪರಸ್ಪರ ಡಿಕ್ಕಿ ಹೊಡೆದುಕೊಂಡು ಸರಣಿ ಅಪಘಾತ ಸಂಭವಿಸಿ ಓರ್ವ ಮಹಿಳೆ ಸಾವನ್ನಪ್ಪಿರುವ ಘಟನೆ ಉಡುಪಿ ಜಿಲ್ಲೆಯಲ್ಲಿ ನಡೆದಿದೆ.
ಹೆದ್ದಾರಿಯಲ್ಲಿ ವಿರುದ್ಧ ದಿಕ್ಕಿಗೆ ಬಂದ ಕಾರೊಂದು ಇನ್ನೊಂದು ಕಾರಿಗೆ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಎರಡು ಆಟೋ ರಿಕ್ಷಾಗಳೂ ಡಿಕ್ಕಿ ಹೊಡೆದುಕೊಂಡು ಸರಣಿ ಅಪಘಾತಕ್ಕೆ ಕಾರಣವಾಗಿದೆ. ಮೂಳೂರು ಪೇಟೆ ಸಮೀಪವೇ ಈ ಅಪಘಾತ ನಡೆದಿದ್ದು, ರಿಕ್ಷಾದಲ್ಲಿದ್ದ ಹಫೀಸಾಬಿ ಎಂಬ ಮಹಿಳೆ ಮೃತಪಟ್ಟಿದ್ದಾರೆ. ಗಾಯಗೊಂಡ ನಾಲ್ವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.
ಕಾರಿನ ಚಾಲಕನ ನಿರ್ಲಕ್ಷ್ಯವೇ ಈ ಅಪಘಾತಕ್ಕೆ ಕಾರಣವಾಗಿದ್ದು, ಆತನ ವಿರುದ್ಧ ಪ್ರಕರಣ ದಾಖಲಾಗಿದೆ. ಅಪಘಾತದಿಂದ ಕೆಲಕಾಲ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಚಾರ ವ್ಯತ್ಯಯವಾಗಿತ್ತು. ಸ್ಥಳಕ್ಕೆ ಧಾವಿಸಿದ ಕಾಪು ಪೊಲೀಸರು ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟರು.