ಹಾಸನ/ ಅರಸೀಕೆರೆ: ಬಟ್ಟೆ ಅಂಗಡಿಯೊಂದಕ್ಕೆ ಆಕಸ್ಮಿಕ ಬೆಂಕಿ ತಗಲಿದ ಪರಿಣಾಮ ಕೋಟ್ಯಂತರ ರೂ. ಬೆಲೆ ಬಾಳುವ ವಸ್ತುಗಳು ಸುಟ್ಟು ಕರಕಲಾಗಿರುವ ಘಟನೆ ತಾಲೂಕಿನ ಬಾಣಾವರದ ಕಣಕಟ್ಟೆ ಬಳಿ ನಡೆದಿದೆ.
ಬೆಂಕಿ ತಗುಲಿ ಸುಟ್ಟು ಕರಕಲಾದ ಬಟ್ಟೆ ಅಂಗಡಿ
ಆಕಸ್ಮಿಕ ಬೆಂಕಿ ತಗಲಿದ ಪರಿಣಾಮ ಬಟ್ಟೆ ಅಂಗಡಿಯೊಂದು ಸಂಪೂರ್ಣವಾಗಿ ಭಸ್ಮವಾಗಿರುವ ಘಟನೆ ಬಾಣಾವರದ ಕಣಕಟ್ಟೆ ಬಳಿ ನಡೆದಿದೆ.
ಆಕಸ್ಮಿಕ ಬೆಂಕಿ ತಗಲಿ ಭಸ್ಮವಾದ ಬಟ್ಟೆ ಅಂಗಡಿ
ಮೋನಿಕ ಕಿಂಗ್ಡಂ ಬಟ್ಟೆ ಅಂಗಡಿಗೆ ಬೆಂಕಿ ತಗಲಿದ್ದು, ಒಂದು ಕೋಟಿಗೂ ಅಧಿಕ ಮೌಲ್ಯದ ಬಟ್ಟೆ ಇನ್ನಿತರೆ ಸಾಮಾಗ್ರಿಗಳು ಸುಟ್ಟು ಕರಕಲಾಗಿವೆ ಎಂದು ಅಂದಾಜಿಸಲಾಗಿದೆ. ಶಾರ್ಟ್ ಸರ್ಕ್ಯೂಟ್ನಿಂದ ಈ ದುರಂತ ಸಂಭವಿಸಿರಬಹುದೆಂಬ ಶಂಕೆ ವ್ಯಕ್ತವಾಗಿದೆ.
ಬೆಳಗಿನ ಜಾವ 3 ಗಂಟೆಗೆ ಈ ಘಟನೆ ಸಂಭವಿಸಿದ್ದು, ಸ್ಥಳಕ್ಕೆ ಅರಸೀಕೆರೆ ಅಗ್ನಿ ಶಾಮಕ ಠಾಣೆಯ ಸಿಬ್ಬಂದಿ ಆಗಮಿಸಿ ಬೆಂಕಿ ನಂದಿಸುವ ಮೂಲಕ ಹೆಚ್ಚಿನ ಅನಾಹುತ ತಪ್ಪಿಸಿದ್ದಾರೆ.