ಉಳ್ಳಾಲ ಪೊಲೀಸರಿಗೆ ಕೋವಿಡ್ ಕಾಟ: ಮತ್ತೆ ಆರು ಸಿಬ್ಬಂದಿಗೆ ಕೊರೊನಾ - Corona updates
ಉಳ್ಳಾಲ ನಗರ ಪೊಲೀಸ್ ಠಾಣೆಯ ಸಿಬ್ಬಂದಿಗೆ ಕೊರೊನಾ ಕಾಟ ಮುಂದುವರೆದಿದ್ದು, ಇಂದು ಕೂಡ ಆರು ಮಂದಿ ಪೊಲೀಸರಿಗೆ ಸೋಂಕು ತಗುಲಿರುವುದು ಖಚಿತವಾಗಿದೆ.
ಉಳ್ಳಾಲ: ನಗರದ ಪೊಲೀಸ್ ಠಾಣೆಯಲ್ಲಿ ಮತ್ತೆ ಆರು ಜನ ಸಿಬ್ಬಂದಿಗೆ ಕೋವಿಡ್ ಸೋಂಕು ತಗುಲಿರುವುದು ದೃಢವಾಗಿದೆ.
ಇಂದು ಠಾಣೆಯ ಓರ್ವ ಹೋಂ ಗಾರ್ಡ್ ಮತ್ತು ಐವರು ಪೊಲೀಸ್ ಸಿಬ್ಬಂದಿಗೆ ಕೋವಿಡ್-19 ದೃಢವಾಗಿದೆ. ಇದರಿಂದ ಠಾಣೆಯ ಹತ್ತು ಆರಕ್ಷಕರು ಮತ್ತು ಇಬ್ಬರು ಆರೋಪಿಗಳಿಗೆ ಕೋವಿಡ್ ಸೋಂಕು ತಗುಲಿದಂತಾಗಿದೆ. ಸದ್ಯ ಠಾಣೆಯನ್ನು ಭಾಗಶಃ ಸೀಲ್ ಡೌನ್ ಮಾಡಲಾಗಿದೆ.
ಖಾಸಗಿ ಆಸ್ಪತ್ರೆಯಲ್ಲಿ ಸೋಂಕು
ಇಲ್ಲಿನ ಖಾಸಗಿ ಆಸ್ಪತ್ರೆಯಲ್ಲಿ ಅನಾರೋಗ್ಯ ಕಾರಣದಿಂದ ದಾಖಲಾಗಿದ್ದ ಎಂಟು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ ಎನ್ನಲಾಗಿದೆ. ಇದುವರೆಗೆ ಕ್ಷೇತ್ರದಲ್ಲಿ 47 ಜನರಿಗೆ ಸೋಂಕು ತಗುಲಿರುವುದು ದೃಢವಾಗಿದ್ದು, ಇಬ್ಬರು ಮೃತಪಟ್ಟಿದ್ದಾರೆ. ಇಂದು ಮುಂಜಾನೆ 60 ವರ್ಷದ ಮಹಿಳೆ ಸೋಂಕಿಗೆ ಬಲಿಯಾಗಿದ್ದಾರೆ.