ಕೋಲ್ಕತ್ತಾ:ಮೇ 30ರಿಂದ ಇಂಗ್ಲೆಂಡ್ನಲ್ಲಿ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ ಆರಂಭಗೊಳ್ಳಲಿದ್ದು, ಅದಕ್ಕಾಗಿ ಎಲ್ಲ ತಂಡಗಳು ಜಾತಕ ಪಕ್ಷಿಗಳಂತೆ ಕಾಯುತ್ತಿವೆ. ಇದರ ಮಧ್ಯೆ ಟೀಂ ಇಂಡಿಯಾ ಮಾಜಿ ಕ್ಯಾಪ್ಟನ್ ಸೌರವ್ ಗಂಗೂಲಿ ಈ ಸಲದ ವಿಶ್ವಕಪ್‌ನಲ್ಲಿ ಯಾವೆಲ್ಲಾ ತಂಡಗಳು ಸೆಮಿಫೈನಲ್‌ಗೆ ಲಗ್ಗೆಯಿಡಲಿವೆ ಎಂಬ ಭವಿಷ್ಯ ನುಡಿದಿದ್ದಾರೆ.
ಗಂಗೂಲಿ ಪ್ರಕಾರ, ಈ ಸಲದ ವಿಶ್ವಕಪ್‌ನಲ್ಲಿ ಟೀಂ ಇಂಡಿಯಾ ಜತೆಗೆ ಪಾಕಿಸ್ತಾನ, ಆಸ್ಟ್ರೇಲಿಯಾ ಹಾಗೂ ಇಂಗ್ಲೆಂಡ್ ತಂಡಗಳು ಸೆಮಿಫೈನಲ್ ಹಂತಕ್ಕೆ ತಲುಪಲಿವೆಯಂತೆ. ಇದರ ಜತೆಗೆ ವಿರಾಟ್ ಕೊಹ್ಲಿ ನೇತೃತ್ವದ ಭಾರತ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಒಂದಾಗಿದೆ ಎಂದು ಹೇಳಿದ್ದಾರೆ.