ಕೊಪ್ಪಳ:ಜಿಲ್ಲೆಯ ವಿವಿಧ ದೇಗುಲಗಳಲ್ಲಿ ಮಳೆರಾಯನ ವರಿಸಿಕೊಳ್ಳಲು ಇಂದು ವಿಶೇಷ ಪೂಜೆ, ಹೋಮಗಳನ್ನು ಮಾಡಲಾಯಿತು.
ವರುಣನ ಕೃಪೆಗಾಗಿ ರಾಜ್ಯಾದ್ಯಂತ ಜಪ-ತಪ
ರಾಜ್ಯ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲಾ ಮುಜರಾಯಿ ಇಲಾಖೆಗೊಳಪಟ್ಟ ದೇಗುಲಗಳಲ್ಲಿ ವಿಶೇಷ ಪೂಜೆ ಹಾಗೂ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.
ದೇಗುಲವೊಂದರಲ್ಲಿ ಜಪ ಮಾಡುತ್ತಿರುವುದು
ರಾಜ್ಯ ಸರ್ಕಾರದ ಸೂಚನೆ ಹಿನ್ನೆಲೆಯಲ್ಲಿ ಜಿಲ್ಲೆಯ ಮುಜರಾಯಿ ಇಲಾಖೆಗೊಳಪಟ್ಟ ದೇಗುಲಗಳಲ್ಲಿ ವಿಶೇಷ ಪೂಜೆ ನಡೆಸಿ ಪ್ರಾರ್ಥಿಸಲಾಗುತ್ತಿದೆ.
ಜಿಲ್ಲೆಯ ಗಂಗಾವತಿ ತಾಲೂಕಿನ ಅಂಜನಾದ್ರಿ ಆಂಜನೇಯ ದೇವಾಲಯ, ಕನಕಗಿರಿಯ ಶ್ರೀಕನಕಾಚಲ ಲಕ್ಷ್ಮಿ ನರಸಿಂಹಸ್ವಾಮಿ ದೇವಾಯಲ ಹಾಗೂ ಕೊಪ್ಪಳ ತಾಲೂಕಿನ ಹುಲಗಿಯ ಹುಲಿಗೆಮ್ಮದೇವಿ ದೇಗುಲಗಳಲ್ಲಿ ಬೆಳಗ್ಗೆಯಿಂದಲೇ ಎಲ್ಲ ಕಾರ್ಯಕ್ರಮಗಳು ನಡೆಸಲಾಗುತ್ತಿದೆ. ಅಭಿಷೇಕ, ಕುಂಕುಮಾರ್ಚನೆ ಸೇರಿದಂತೆ ವಿವಿಧ ಪೂಜೆ ಪುನಸ್ಕಾರಗಳು ಜರುಗಿದವು. ಇನ್ನು ಹುಲಗಿಯ ಶ್ರೀ ಹುಲಿಗೆಮ್ಮದೇವಿ ದೇವಸ್ಥಾನದಲ್ಲಿ ಮಳೆಗಾಗಿ ಪರ್ಜನ್ಯ ಜಪ, ಹೋಮ ನಡೆಯಿತು.