ಕರ್ನಾಟಕ

karnataka

ETV Bharat / briefs

ಶ್ರೀಲಂಕಾದಲ್ಲಿ ಸಾಮಾಜಿಕ ಮಾಧ್ಯಮ ಮೇಲೆ ನಿಷೇಧ ತೆರವು, ಜನರು ನಿರಾಳ

ರಾಜಧಾನಿ ಕೊಲಂಬೋದಲ್ಲಿ ನಡೆದ ಭೀಕರ ಬಾಂಬ್ ಸ್ಫೋಟದ ಬಳಿಕ ಮುನ್ನೆಚ್ಚರಿಕಾ ಕ್ರಮವಾಗಿ ತಪ್ಪು, ಸುಳ್ಳು ಮಾಹಿತಿ ಹರಡುವುದನ್ನು ತಡೆಯಲು ಸರ್ಕಾರ ಸಾಮಾಜಿಕ ಮಾಧ್ಯಮಗಳ ಮೇಲೆ ನಿಷೇಧ ಹೇರಿತ್ತು.ಇದೀಗ ಈ ನಿರ್ಬಂಧ ತೆರವುಗೊಳಿಸಲಾಗಿದ್ದು, ಜನರು ನಿಟ್ಟುಸಿರು ಬಿಟ್ಟಿದ್ದಾರೆ.

ಲಂಕಾದಲ್ಲಿ ಸಾಮಾಜಿಕ ಮಾಧ್ಯಮಗಳ ಮೇಲೆ ನಿಷೇಧ ತೆರವು

By

Published : Apr 30, 2019, 5:57 PM IST

ಕೊಲಂಬೋ(ಶ್ರೀಲಂಕಾ): ಸರಣಿ ಬಾಂಬ್ ಸ್ಫೋಟಕ್ಕೆ ಇಡೀ ದೇಶವೇ ತಲ್ಲಣಗೊಂಡ ಬಳಿಕ ಶ್ರೀಲಂಕಾ ಸರ್ಕಾರ, ಜನರು ಆತಂಕಕ್ಕೊಳಗಾಗುವುದನ್ನು ತಪ್ಪಿಸಲು ಫೇಸ್ ಬುಕ್, ಟ್ವಿಟರ್ ಮುಂತಾದ ಸೋಶಿಯಲ್ ಮೀಡಿಯಾಗಳನ್ನು ಬಳಸದಂತೆ ಕಠಿಣ ಕ್ರಮ ಕೈಗೊಂಡಿತ್ತು. ಇದೀಗ ದೇಶದ ಅಧ್ಯಕ್ಷ ಮೈತ್ರಿಪಾಲ ಸಿರಿಸೇನ ಸರ್ಕಾರ ನಿರ್ಬಂಧ ತೆರವುಗೊಳಿಸಿದ್ದಾರೆ. ಹಾಗಾಗಿ, ಜನರು ವಾಟ್ಸಪ್‌, ಯೂಟ್ಯೂಬ್‌, ಫೇಸ್‌ಬುಕ್‌ ಮುಂತಾದ ಜನಪ್ರಿಯ ಜಾಲತಾಣಗಳನ್ನು ಬಳಸಬಹುದಾಗಿದೆ.

ಸಾಮಾಜಿಕ ಜಾಲತಾಣಗಳನ್ನು ಜವಾಬ್ದಾರಿಯುತವಾಗಿ ಬಳಸಿ ಎಂದು ಇದೇ ವೇಳೆ ಅಧ್ಯಕ್ಷ ಮೈತ್ರಿಪಾಲ ಜನರಿಗೆ ಮನವಿ ಮಾಡಿದ್ದಾರೆ.

ಏಪ್ರಿಲ್ 21 ರಂದು ಕ್ರಿಶ್ಚಿಯನ್ ಪ್ರಾರ್ಥನಾ ಮಂದಿರಗಳೂ ಸೇರಿದಂತೆ ಪಂಚತಾರಾ ಹೊಟೇಲುಗಳಲ್ಲಿ ಸರಣಿ ಬಾಂಬ್‌ ಸ್ಫೋಟ ನಡೆದಿತ್ತು. ಘಟನೆಯಲ್ಲಿ 253 ಕ್ಕೂ ಹೆಚ್ಚು ಜನರು ಮೃತಪಟ್ಟು 400 ಕ್ಕೂ ಹೆಚ್ಚು ಜನ ಗಾಯಗೊಂಡಿದ್ದರು.

ABOUT THE AUTHOR

...view details