ಕರ್ನಾಟಕ

karnataka

ETV Bharat / briefs

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಗಮವಾಗಿ ನಡೆದ ಎಸ್​ಎಸ್​​ಎಲ್​​​ಸಿ ಪರೀಕ್ಷೆ - ಬೆಂಗಳೂರು ಗ್ರಾಮಾಂತರ ಜಿಲ್ಲಾ ಸುದ್ದಿ

ಎಸ್​ಎಸ್​ಎಲ್​​ಸಿ ಪರೀಕ್ಷೆ ಸರ್ಕಾರದ ಮಾರ್ಗಸೂಚಿಗೆ ಅನುಗುಣವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಸುಗಮವಾಗಿ ಜರುಗಿದ್ದು, ಮೊದಲ ದಿನ 471 ವಿದ್ಯಾರ್ಥಿಗಳು ಗೈರಾದರು. ಅನಾರೋಗ್ಯ ಹಿನ್ನೆಲೆ 4 ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿ ನೀಡಲಾಗಿತ್ತು.

Sslc examination successfully finished in Bangalore rural district
Sslc examination successfully finished in Bangalore rural district

By

Published : Jun 25, 2020, 4:00 PM IST

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿಂದು ಎಸ್​ಎಸ್​​​ಎಲ್​​ಸಿ ಪರೀಕ್ಷೆ ಯಾವುದೇ ಅಡೆತಡೆಗಳಿಲ್ಲದೆ ಸುಗಮವಾಗಿ ಜರುಗಿದೆ.

ಜಿಲ್ಲೆಯಲ್ಲಿ ಒಟ್ಟು 52 ಪರೀಕ್ಷಾ ಕೇಂದ್ರಗಳಲ್ಲಿ 13,059 ವಿದ್ಯಾರ್ಥಿಗಳ ಪೈಕಿ 12,588 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿಯಾಗಿದ್ದು, 471 ವಿದ್ಯಾರ್ಥಿಗಳು ಗೈರಾಗಿದ್ದಾರೆ.

ಕೆಮ್ಮು, ನೆಗಡಿ, ಜ್ವರ ಲಕ್ಷಣಗಳಿಂದ ಬಳಲುತ್ತಿದ್ದ 4 ವಿದ್ಯಾರ್ಥಿಗಳಿಗೆ ಪ್ರತ್ಯೇಕ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. ಕಂಟೈನ್ಮೆಂಟ್ ವಲಯದಿಂದ ಬಂದ 30 ವಿದ್ಯಾರ್ಥಿಗಳು, ಬೇರೆ ಜಿಲ್ಲೆಯಿಂದ ವಲಸೆ ಬಂದ 58 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಿದ್ದರು.

ABOUT THE AUTHOR

...view details