ಕರ್ನಾಟಕ

karnataka

ETV Bharat / briefs

ರಾಜ್ಯ ಸರ್ಕಾರಕ್ಕೆ ಬರಬೇಕಾಗಿರುವ GSTಪರಿಹಾರ ನಷ್ಟದ ಬಾಕಿ ನೀಡುವಂತೆ ಕೇಂದ್ರಕ್ಕೆ ರಾಜ್ಯದ ಮನವಿ

2021 - 22 ನೇ ಸಾಲಿನ ಜಿಎಸ್​​​ಟಿ ಪರಿಹಾರ ನಷ್ಟದ ಹಣವನ್ನು ಕೇಂದ್ರ ಸರ್ಕಾರವೇ ಸಾಲ ಪಡೆದು ರಾಜ್ಯಕ್ಕೆ ನೀಡಬೇಕು. 2020- 21 ನೇ ಸಾಲಿನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ 11 ಸಾವಿರ ಕೋಟಿ ರೂಪಾಯಿ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಸಚಿವ ಬಸವರಾಜ್ ಬೊಮ್ಮಾಯಿ ಮನವಿ ಮಾಡಿಕೊಂಡಿದ್ದಾರೆ.

 State requests the Center to pay GST compensation dues
State requests the Center to pay GST compensation dues

By

Published : May 28, 2021, 10:11 PM IST

ಬೆಂಗಳೂರು: ರಾಜ್ಯ ಸರ್ಕಾರಕ್ಕೆ ಕೇಂದ್ರ ಸರ್ಕಾರದಿಂದ ಬರಬೇಕಾಗಿರುವ ಜಿಎಸ್ಟಿ ಪರಿಹಾರ ನಷ್ಟದ ಬಾಕಿ ಮೊತ್ತ 11 ಸಾವಿರ ಕೋಟಿ ರೂಪಾಯಿ ಹಣವನ್ನು ಕೂಡಲೇ ಬಿಡುಗಡೆ ಮಾಡುವಂತೆ ಜಿ ಎಸ್ ಟಿ ಮಂಡಳಿಯ ರಾಜ್ಯ ಪ್ರತಿನಿಧಿ ಹಾಗೂ ಗೃಹ, ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಬಸವರಾಜ್ ಬೊಮ್ಮಾಯಿ ಅವರು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರಿಗೆ ಮನವಿ ಮಾಡಿದ್ದಾರೆ.

ಇಂದು ನಡೆದ ಜಿಎಸ್ಟಿ ಮಂಡಳಿಯ 43 ನೇ ಸಭೆಯಲ್ಲಿ ಬೆಂಗಳೂರಿನಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ಭಾಗವಹಿಸಿ ಮಾತನಾಡಿದ ಅವರು, 2021 - 22 ನೇ ಸಾಲಿನ ಜಿಎಸ್ಟಿ ಪರಿಹಾರದ ನಷ್ಟದ ಹಣವನ್ನು ಕೇಂದ್ರ ಸರ್ಕಾರವೇ ಸಾಲಪಡೆದು ರಾಜ್ಯಕ್ಕೆ ನೀಡಬೇಕು. 2020- 21 ನೇ ಸಾಲಿನಲ್ಲಿ ರಾಜ್ಯಕ್ಕೆ ಬರಬೇಕಾಗಿರುವ 11 ಸಾವಿರ ಕೋಟಿ ರೂಪಾಯಿ ಪರಿಹಾರವನ್ನು ಶೀಘ್ರದಲ್ಲಿ ಬಿಡುಗಡೆ ಮಾಡಬೇಕು ಎಂದು ಮನವಿ ಮಾಡಿಕೊಂಡಿದ್ದಾರೆ.

ಜಿಎಸ್ ಟಿ ಪರಿಹಾರ ಸೆಸ್ ನಲ್ಲಿಯೂ ಬಾಕಿ ಉಳಿದಿರುವ ಹಣವನ್ನು ರಾಜ್ಯಕ್ಕೆ ಬಿಡುಗಡೆ ಮಾಡಬೇಕು. ಜಿಎಸ್​​​ಟಿ ನಷ್ಟ ಪರಿಹಾರ ಒದಗಿಸುವ ಸೌಲಭ್ಯ 2021- 2022ಕ್ಕೆ ಮುಕ್ತಾಯಗೊಳ್ಳಲಿದೆ. ಆದರೆ, 2021- 2022 ರ ನಂತರವೂ ಜಿ ಎಸ್ ಟಿ ನಷ್ಟ ಪರಿಹಾರ ಸೌಲಭ್ಯವನ್ನು ಮುಂದುವರಿಸುವ ಕುರಿತು ಚರ್ಚೆ ನಡೆಯಬೇಕು ಎಂದು ಅವರು ಸಭೆಯಲ್ಲಿ ಪ್ರಸ್ತಾಪಿಸಿದರು.

ABOUT THE AUTHOR

...view details