ಕರ್ನಾಟಕ

karnataka

ETV Bharat / briefs

ಮಂಡ್ಯದಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ.. ವೈದ್ಯರ ಕಾರ್ಯಕ್ಕೆ ಕುಟುಂಬದಿಂದ ಸಲಾಂ - ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ

ಮಂಡ್ಯದ ಮಿಮ್ಸ್ ಆಸ್ಪತ್ರೆಯಲ್ಲಿ ಕೊರೊನಾ ಪಾಸಿಟಿವ್ ಬಂದಿದ್ದ ಗರ್ಭಿಣಿಗೆ ವೈದ್ಯರು ಯಶಸ್ವಿಯಾಗಿ ಹೆರಿಗೆ ಮಾಡಿಸಿದ್ದಾರೆ. ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಶಸ್ತ್ರ ಚಿಕಿತ್ಸೆ ಮೂಲಕ ವೈದ್ಯರು ಸುರಕ್ಷಿತ ಹೆರಿಗೆ ಮಾಡಿಸಿದ್ದು ಮಗುವಿನ ಕುಟುಂಬಸ್ಥರ ಮುಖದಲ್ಲಿ ಮಂದಹಾಸ ಮೂಡಿದೆ.

Successful delivery of corona-infected pregnant woman
Successful delivery of corona-infected pregnant woman

By

Published : Apr 29, 2021, 3:35 PM IST

ಮಂಡ್ಯ:ಇಲ್ಲಿನ ಮಿಮ್ಸ್​ ಜಿಲ್ಲಾಸ್ಪತ್ರೆಯಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಯಶಸ್ವಿ ಹೆರಿಗೆ ಮಾಡಿಸಲಾಗಿದ್ದು, ಜನಿಸಿರುವ ಗಂಡು ಮಗು ಆರೋಗ್ಯವಾಗಿದೆ.

ಮದ್ದೂರು ತಾಲೂಕಿನ ಉಪ್ಪಿನಕೆರೆ ಗ್ರಾಮದ ಸೌಂದರ್ಯ-ಅಂಬರೀಶ್ ದಂಪತಿಗೆ ಗಂಡು ಮಗು ಜನನವಾಗಿದ್ದು, ಕುಟುಂಬಸ್ಥರಿಗೆ ಸಂತಸ ತಂದಿದೆ. ಡಾ. ಯೋಗೇಂದ್ರ ಕುಮಾರ್ ನೇತೃತ್ವದಲ್ಲಿ ಕೋವಿಡ್ ಸೋಂಕಿತ ಗರ್ಭಿಣಿಗೆ ಶಸ್ತ್ರ ಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ.
ಮಗು ಆರೋಗ್ಯವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. ಸದ್ಯ ಶಸ್ತ್ರ ಚಿಕಿತ್ಸೆ ಯಶಸ್ವಿಯಾಗಿದ್ದಕ್ಕೆ ವೈದ್ಯರು ಮತ್ತು ಮಗುವಿನ ಕುಟುಂಬಸ್ಥರ ಮೊಗದಲ್ಲಿ ಮಂದಹಾಸ ಮೂಡಿದೆ.

ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮಾಡಿದ ಹಿನ್ನೆಲೆ ಇನ್ನೆರಡು ದಿನದಲ್ಲಿ ಮಗುವಿಗೂ ಕೂಡ ಕೋವಿಡ್ ಪರೀಕ್ಷೆ ಮಾಡಲಾಗುವುದು ಎಂದು ವೈದ್ಯರು ಮಾಹಿತಿ ನೀಡಿದ್ದಾರೆ. ವೈದ್ಯರ ಕಾರ್ಯಕ್ಕೆ ಕುಟುಂಬಸ್ಥರು ಹಾಗೂ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಓಬಿಜಿ ಸ್ಪೆಷಲಿಸ್ಟ್ ಡಾ.ಯೋಗೇಂದ್ರ ಕುಮಾರ್, ಅರವಳಿಕೆ ತಜ್ಞ ಡಾ.ವಿನಯ್, ಕಾರ್ತಿಕ್, ಶಸ್ತ್ರ ಚಿಕಿತ್ಸೆ ಸಹಾಯಕರಾದ ಡಾ.ಪೂಜಾ, ಡಾ.ರಂಜಿತ ಮತ್ತು ತಂಡ ಯಶಸ್ವಿ ಹೆರಿಗೆ ಮಾಡಿಸಿದ್ದಾರೆ.

For All Latest Updates

ABOUT THE AUTHOR

...view details