ಕರ್ನಾಟಕ

karnataka

ETV Bharat / briefs

ಚಿತ್ರೋದ್ಯಮ ಕಾರ್ಮಿಕರಿಗೆ ಉಚಿತ ಅಕ್ಕಿ ವಿತರಿಸಿ: ಸರ್ಕಾರಕ್ಕೆ ಸುನೀಲ್ ಪುರಾಣಿಕ್ ಮನವಿ - ಚಿತ್ರರಂಗದ ಮೇಲೆ ಕೊರೊನಾ ಪ್ರಭಾವ

ಚಿತ್ರೋದ್ಯಮದ ಪ್ರತಿ ಕುಟುಂಬಕ್ಕೆ 25ಕೆಜಿಯ ಒಂದು ಚೀಲದಂತೆ ಕನಿಷ್ಠ 5000ಚೀಲ ಅಕ್ಕಿಯನ್ನು ಉಚಿತವಾಗಿ ವಿತರಿಸಿದರೆ ಅವರ ಕುಟುಂಬಗಳಿಗೆ ನೆರವಾಗಲಿದೆ ಎಂದು ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

ಉಚಿತ ಅಕ್ಕಿ ವಿತರಣೆಗೆ ಸುನೀಲ್ ಪುರಾಣಿಕ್ ಸರ್ಕಾರಕ್ಕೆ ಮನವಿ
ಉಚಿತ ಅಕ್ಕಿ ವಿತರಣೆಗೆ ಸುನೀಲ್ ಪುರಾಣಿಕ್ ಸರ್ಕಾರಕ್ಕೆ ಮನವಿ

By

Published : Jun 9, 2021, 7:14 PM IST

ಕೊರೊನಾ 2ನೇ ಅಲೆಯ ಸಾಂಕ್ರಾಮಿಕ ರೋಗದಿಂದ ತೀವ್ರ ಸಂಕಷ್ಟದಲ್ಲಿರುವ ಕನ್ನಡ ಚಿತ್ರೋದ್ಯಮದ ಕಲಾವಿದರು, ತಂತ್ರಜ್ಞರು ಹಾಗೂ ಕಾರ್ಮಿಕರಿಗೆ ಸರ್ಕಾರದಿಂದ ಉಚಿತ ಅಕ್ಕಿ ವಿತರಿಸುವಂತೆ ಕರ್ನಾಟಕ ಚಲನಚಿತ್ರ ಅಕಾಡೆಮಿ ಅಧ್ಯಕ್ಷ ಸುನೀಲ್ ಪುರಾಣಿಕ್ ಅವರು ಚಿತ್ರರಂಗದ ಇತರ ಗಣ್ಯರೊಂದಿಗೆ ಸಚಿವ ಉಮೇಶ್ ಕತ್ತಿ ಹಾಗೂ ಸಚಿವ ಸಿ.ಸಿ.ಪಾಟೀಲ್ ಅವರನ್ನು ಭೇಟಿಯಾಗಿ ಮನವಿ ಸಲ್ಲಿಸಿದರು.

ಕೋವಿಡ್ ಸಾಂಕ್ರಾಮಿಕದಿಂದ ತೀವ್ರ ಸಂಕಷ್ಟದಲ್ಲಿದ್ದ ಕನ್ನಡ ಚಿತ್ರೋದ್ಯಮದವರಿಗೆ ಸರ್ಕಾರದಿಂದ ಆರ್ಥಿಕ ನೆರವು ಹಾಗೂ ರೋಗ ನಿರೋಧಕ ಚುಚ್ಚುಮದ್ದು ಪ್ರತ್ಯೇಕವಾಗಿ ವ್ಯವಸ್ಥೆ ಮಾಡಿದ್ದನ್ನು ಕನ್ನಡ ಚಿತ್ರರಂಗ ಸ್ಮರಿಸುತ್ತದೆ.

ತಮಗೇ ತಿಳಿದಿರುವಂತೆ ಲಾಕ್​ಡೌನ್​ನಿಂದಾಗಿ ಚಿತ್ರೋದ್ಯಮದ ಚಟುವಟಿಕೆಗಳು ಸ್ಥಗಿತವಾಗಿರುವುದರಿಂದ ಇಡೀ ಚಿತ್ರೋದ್ಯಮ ಸಂಕಷ್ಟಕ್ಕೆ ಸಿಲುಕಿದೆ. ಚಿತ್ರೋದ್ಯಮದ ಎಷ್ಟೋ ಕಾರ್ಮಿಕರು, ತಂತ್ರಜ್ಞರು ಪಡಿತರ ಕಾರ್ಡುಗಳನ್ನೂ ಸಹ ಹೊಂದಿರುವುದಿಲ್ಲ. ಆದ್ದರಿಂದ ಪ್ರತಿ ಕುಟುಂಬಕ್ಕೆ 25ಕೆಜಿಯ ಒಂದು ಚೀಲದಂತೆ ಕನಿಷ್ಠ 5000ಚೀಲ ಅಕ್ಕಿಯನ್ನು ಉಚಿತವಾಗಿ ವಿತರಿಸಿದರೆ ಅವರ ಕುಟುಂಬಗಳಿಗೆ ನೆರವಾಗಲಿದೆ ಎಂದು ಅವರು ಮನವಿಯಲ್ಲಿ ವಿವರಿಸಿದ್ದಾರೆ.

ಅಲ್ಲದೇ ಸರ್ಕಾರದಿಂದ ನೀಡಲಾಗುತ್ತಿರುವ ಆರ್ಥಿಕ ನೆರವಿನ ಸದುಪಯೋಗ ಪಡೆದುಕೊಳ್ಳಲು ಚಿತ್ರೋದ್ಯಮಕ್ಕೆ ಪ್ರತ್ಯೇಕವಾಗಿ ಎರಡು ಸೇವಾಸಿಂಧು ಕೌಂಟರ್​ಗಳನ್ನು ತೆರೆಯುವಂತೆ ವಾರ್ತಾ ಸಚಿವ ಸಿ.ಸಿ.ಪಾಟೀಲ್ ಅವರಲ್ಲಿ ಅವರು ವಿನಂತಿಸಿದ್ದಾರೆ.

ABOUT THE AUTHOR

...view details