ನವದೆಹಲಿ:ರಫೇಲ್ ಡೀಲ್ನ ಮೇಲ್ಮನವಿ ಅರ್ಜಿಗೆ ಸಂಬಂಧಿಸಿದಂತೆ ಸರ್ವೋಚ್ಛ ನ್ಯಾಯಾಲಯ ಇಂದು ತನ್ನ ಮಹತ್ವದ ತೀರ್ಪು ನೀಡಲಿದೆ.
ರಫೇಲ್ ಡೀಲ್ನಲ್ಲಿ ಅವ್ಯವಹಾರ ನಡೆದಿದೆ ಹಾಗೂ ಈ ಕುರಿತಂತೆ ಸೂಕ್ತ ತನಿಖೆ ನಡೆಯಬೇಕು ಎಂದು ವಕೀಲ ಪ್ರಶಾಂತ್ ಭೂಷಣ್ ಹಾಗೂ ಕೆಲವರು ಸುಪ್ರೀಂನಲ್ಲಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯನ್ನು ತಳ್ಳಿಹಾಕಿದ್ದ ಸುಪ್ರೀಂ ಕಳೆದ ಡಿಸೆಂಬರ್ನಲ್ಲಿ ಮೋದಿ ಸರ್ಕಾರಕ್ಕೆ ಕ್ಲೀನ್ಚಿಟ್ ನೀಡಿತ್ತು.