ಕೋಲ್ಕತಾ (ಪಶ್ಚಿಮ ಬಂಗಾಳ):ಟಾರ್ಪಾಲಿನ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಶಾಸಕ ಮತ್ತು ಪಶ್ಚಿಮ ಬಂಗಾಳ ವಿಧಾನಸಭೆಯ ಪ್ರತಿಪಕ್ಷ ನಾಯಕ ಸುವೇಂದು ಅಧಿಕಾರ ಇಂದು ಕಲ್ಕತ್ತಾ ಹೈಕೋರ್ಟ್‌ಗೆ ಹಾಜರಾದರು. ಈ ಕುರಿತು ಹೈಕೋರ್ಟ್ ಜೂನ್ 22 ರಂದು ವಿಚಾರಣೆ ನಡೆಸಲಿದೆ.
ಕಾಂತಿ ಪುರಸಭೆ ಕಚೇರಿಯಿಂದ ಪರಿಹಾರ ಸಾಮಗ್ರಿಗಳನ್ನು ಕದ್ದ ಆರೋಪದ ಮೇಲೆ ಜೂನ್ 5 ರಂದು ಬಿಜೆಪಿ ಮುಖಂಡ ಸುವೇಂದು ಅಧಿಕಾರಿ ಮತ್ತು ಅವರ ಸಹೋದರ ಸೌಮೆಂದು ಅಧಿಕಾರಿ ವಿರುದ್ಧ ಎಫ್ಐಆರ್ ದಾಖಲಿಸಲಾಗಿತ್ತು. ಕಾಂತಿ ಪುರಸಭೆ ಆಡಳಿತ ಮಂಡಳಿಯ ಸದಸ್ಯ ರತ್ನದೀಪ್ ಮನ್ನಾ ಅವರ ದೂರಿನ ಮೇರೆಗೆ ಅಧಿಕಾರಿ ಸಹೋದರರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.