ಸೌತಾಂಪ್ಟನ್:ವಿಶ್ವಕಪ್ ಟೂರ್ನಿಯಲ್ಲಿ ಟೀಂ ಇಂಡಿಯಾ ತನ್ನ ಅಭಿಯಾನವನ್ನು ಬುಧವಾರದಂದು ಆರಂಭಿಸಲಿದ್ದು ಈ ಹಿನ್ನೆಲೆಯಲ್ಲಿ ಕೊಹ್ಲಿ ಬಳಗ ಭರ್ಜರಿ ತಾಲೀಮಿನಲ್ಲಿ ತೊಡಗಿದೆ.
ರೋಸ್ ಬೌಲ್ ಮೈದಾನದಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಹಾಗೂ ತಂಡದ ಹಿರಿಯ ಆಟಗಾರ ಎಂ.ಎಸ್ ಧೋನಿ ಪ್ರಾಕ್ಟೀಸ್ ಮಾಡುತ್ತಿರುವ ವಿಡಿಯೋವನ್ನು ಬಿಸಿಸಿಐ ತನ್ನ ಟ್ವಿಟರ್ ಖಾತೆಯಲ್ಲಿ ಪೋಸ್ಟ್ ಮಾಡಿದೆ.
ವಿಶ್ವಕಪ್ನಲ್ಲಿ ಅಪರೂಪದ ದಾಖಲೆ ಬರೆದ ಪಾಕಿಸ್ತಾನ..!
ಪ್ರಾಕ್ಟೀಸ್ ವೇಳೆ ಧೋನಿ ಭರ್ಜರಿ ಸಿಕ್ಸರ್ಗಳನ್ನು ಸಿಡಿಸಿದ್ದಾರೆ. ಇತ್ತ ರಾಹುಲ್ ಸಹ ನೆಟ್ನಲ್ಲಿ ಸಾಕಷ್ಟು ಬೆವರು ಸುರಿಸಿದ್ದಾರೆ. ಇನ್ನುಳಿದಂತೆ ನಾಯಕ ಕೊಹ್ಲಿ, ಹಾರ್ದಿಕ್ ಪಾಂಡ್ಯ, ಶಿಖರ್ ಧವನ್,ವಿಜಯ್ ಶಂಕರ್, ಸ್ಪಿನ್ನರ್ ಕುಲ್ದೀಪ್ ಯಾದವ್ ಸಹ ತಾಲೀಮು ನಡೆಸಿದ್ದಾರೆ.
ದಕ್ಷಿಣ ಆಫ್ರಿಕಾ ಈಗಾಗಲೇ ಮೊದಲೆರಡು ಪಂದ್ಯವನ್ನು ಸೋತಿದ್ದು, ಭಾರತದ ವಿರುದ್ಧ ಪುಟಿದೇಳುವ ಇರಾದೆ ಹೊಂದಿದೆ. ಮೊದಲ ಪಂದ್ಯದಲ್ಲಿ ಆತಿಥೇಯ ಇಂಗ್ಲೆಂಡ್ ವಿರುದ್ಧ 104 ರನ್ ಹಾಗೂ ಬಾಂಗ್ಲಾದೇಶ ವಿರುದ್ಧ 21 ರನ್ಗಳಿಂದ ದಕ್ಷಿಣ ಆಫ್ರಿಕಾ ಸೋಲನುಭವಿಸಿದೆ.