ಮಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಒಂದು ಸಮುದಾಯವನ್ನು ನಿಂದಿಸಿ, ಜೀವ ಬೆದರಿಕೆ ಒಡ್ಡಿರುವ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಬುಧವಾರ ಸಂಜೆ ಪುತ್ತೂರು ಉಪ ವಿಭಾಗದ ಪೊಲೀಸರು ಬಂಧಿಸಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಜಾತಿ ನಿಂದನೆ: ಆರೋಪಿ ಬಂಧನ - etv bharata
ಈತನ ವಿರುದ್ಧ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ನಾರಾಯಣ ದೂರು ದಾಖಲಿಸಿದ್ದರು.
ಆರೋಪಿ ಸಂದೇಶ್
ಪುತ್ತೂರು ತಾಲೂಕಿನ ಅರಿಯಡ್ಕ ಗ್ರಾಮ ನಿವಾಸಿ ಸಂದೇಶ್ ಕುಮಾರ್(47) ಬಂಧಿತ ಆರೋಪಿ. ಈತನ ವಿರುದ್ಧ ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ಸಂಚಾಲಕ ನಾರಾಯಣ ದೂರು ದಾಖಲಿಸಿದ್ದರು.
ಈ ಸಂಬಂಧ ಪುತ್ತೂರು ಉಪವಿಭಾಗದ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಪ್ರಕರಣ ದಾಖಲಿಸಿಕೊಂಡ ಪುತ್ತೂರು ಉಪವಿಭಾಗ ವೃತ್ತ ನಿರೀಕ್ಷಕರು ಆರೋಪಿಯನ್ನು ಬಂಧಿಸಿದ್ದಾರೆ.