ಹಾಸನ:ಎರಡನೇ ಹಂತದ ಗ್ರಾಮ ಪಂಚಾಯಿತಿ ಚುನಾವಣೆ ನಾಳೆ ನಡೆಯಲಿದ್ದು, ದಂಪತಿ ಇಬ್ಬರು ಬೇಲೂರಿನ ಅರೇಹಳ್ಳಿ ಗ್ರಾಮ ಪಂಚಾಯಿತಿ ಕ್ಷೇತ್ರದಿಂದ 4ನೇ ಬಾರಿಗೆ ಸ್ಪರ್ಧೆ ಮಾಡುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
ಹಾಸನ: 4ನೇ ಬಾರಿ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ ಅರೇಹಳ್ಳಿಯ ಈ ದಂಪತಿ
ಬೇಲೂರಿನ ಅರೇಹಳ್ಳಿ ಗ್ರಾಮ ಪಂಚಾಯಿತಿ ಕ್ಷೇತ್ರದಿಂದ ದಂಪತಿ ಇಬ್ಬರು 4ನೇ ಬಾರಿಗೆ ಗ್ರಾಮ ಪಂಚಾಯಿತಿ ಚುನಾವಣೆ ಎದುರಿಸುತ್ತಿದ್ದು, ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಇವರ ಭವಿಷ್ಯ ಈ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
ಹಾಸನ: 4ನೇ ಬಾರಿಗೆ ಅದೃಷ್ಟ ಪರೀಕ್ಷೆಗೆ ಸಜ್ಜಾಗಿದ್ದಾರೆ ಅರೇಹಳ್ಳಿಯ ಈ ದಂಪತಿ
ತುಳಸಿದಾಸ್ ಮತ್ತು ಮಮತಾ ತುಳಸಿದಾಸ್ ದಂಪತಿ ಕಳೆದ ಮೂರು ಬಾರಿಯೂ ಚುನಾವಣೆಯಲ್ಲಿ ನಿಂತು ಆಯ್ಕೆಯಾಗಿದ್ದು, ಈ ಬಾರಿಯೂ ಮತ್ತೆ ಅದೃಷ್ಟ ಪರೀಕ್ಷೆಗೆ ಸಜ್ಜಾಗಿರುವುದು ವಿಶೇಷ. ಇವರಿಬ್ಬರು ಕಾಂಗ್ರೆಸ್ ಪಕ್ಷದ ಬೆಂಬಲಿತ ಅಭ್ಯರ್ಥಿಯಾಗಿದ್ದಾರೆ.
ನಾಲ್ಕನೇ ಬಾರಿಗೆ ತಮ್ಮ ಅದೃಷ್ಟ ಪರೀಕ್ಷೆಗಿಳಿದಿರುವ ದಂಪತಿ, ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಆದರೆ, ಕಣದಲ್ಲಿ ಜಿದ್ದಾಜಿದ್ದಿಗಿಳಿದಿರುವ ದಂಪತಿಗಳ ಭವಿಷ್ಯ ಈ ಬಾರಿ ಏನಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.
Last Updated : Dec 26, 2020, 5:56 PM IST