ಬೀದರ್: ಮಂಗಳವಾರ ಗುಡುಗು, ಬಿರುಗಾಳಿ ಸಹಿತ ಸುರಿದ ಧಾರಾಕಾರ ಮಳೆಯಲ್ಲಿ ಸಿಡಿಲು ಬಡಿದು ಓರ್ವ ಸಾವನ್ನಪ್ಪಿರುವ ಘಟನೆ ನಡೆದಿದೆ.
ಜಮೀನಿನಲ್ಲಿ ಕೆಲಸ ಮಾಡುತ್ತಿದ್ದ ವೇಳೆ ಸಿಡಿಲು ಬಡಿದು ವ್ಯಕ್ತಿ ಸಾವು - ಸಿಡಿಲು
ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದಿದೆ. ಪರಿಣಾಮ ದಯಾನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ
ಸಿಡಿಲು ಬಡಿದು ವ್ಯಕ್ತಿ ಸಾವು
ಜಿಲ್ಲೆಯ ಹುಮನಾಬಾದ್ ತಾಲೂಕಿನ ದುಬಲಗುಂಡಿ ಗ್ರಾಮದ ದಯಾನಂದ ಸಿದ್ದಣ್ಣ (41) ಸಿಡಿಲಿಗೆ ಬಲಿಯಾದವ.
ಹೊಲದಲ್ಲಿ ಕೆಲಸ ಮಾಡುತ್ತಿರುವಾಗ ಸಿಡಿಲು ಬಡಿದಿದೆ. ಪರಿಣಾಮ ದಯಾನಂದ ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಈ ಕುರಿತು ಹಳ್ಳಿಖೇಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.