ಬಳ್ಳಾರಿ: ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಮಹಾಮಾರಿ ಕೊರೊನಾ ಸೋಂಕಿಗೆ ಮತ್ತೊಂದು ಬಲಿಯಾಗಿದೆ. ಅಲ್ಲದೆ 35 ಹೊಸ ಸೋಂಕಿತ ಪ್ರಕರಣಗಳು ವರದಿಯಾಗಿವೆ.
ಹೊಸಪೇಟೆ ನಿವಾಸಿ 75 ವರ್ಷದ ವಯೋವೃದ್ಧರೊಬ್ಬರು ಮೂತ್ರಪಿಂಡ ಸಮಸ್ಯೆಯಿಂದ ಬಳಲುತ್ತಿದ್ದರು. ಅವರನ್ನು ಚಿಕಿತ್ಸೆಗೆಂದು ಬಳ್ಳಾರಿಯ ವಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ವ್ಯಕ್ತಿಯ ಗಂಟಲು ದ್ರವ (ಸ್ವ್ಯಾಬ್ ಕಲೆಕ್ಟ್) ಸಂಗ್ರಹಣೆ ಮಾಡಿ ಪರೀಕ್ಷೆ ಮಾಡಿದಾಗ ಸೋಂಕು ತಗುಲಿರುವುದು ದೃಢಪಟ್ಟಿತ್ತು. ಸದ್ಯ ಎಸ್‌ಒಪಿ ಪ್ರಕಾರ, ಆ ವ್ಯಕ್ತಿಯ ಅಂತ್ಯಕ್ರಿಯೆ ನಡೆಸಲಾಗುದೆಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ತಿಳಿಸಿದ್ದಾರೆ.
35 ಸೋಂಕಿತರು ಪತ್ತೆ :
ಜಿಲ್ಲೆಯಲ್ಲಿ ಇಂದು ಒಂದೇ ದಿನದಲ್ಲಿ 35 ಮಂದಿಗೆ ಕೋವಿಡ್ ಸೋಂಕು ತಗುಲಿದೆ. ಈ ಪ್ರಕರಣಗಳ ಪೈಕಿ 7 ಮಂದಿ ಜಿಂದಾಲ್ ಕಾರ್ಖಾನೆಯ ನೌಕರರಲ್ಲಿ ಈ ಸೋಂಕು ಕಾಣಿಸಿಕೊಂಡಿದೆ.
ಗಣಿಜಿಲ್ಲೆಯಲ್ಲಿ ಕೊರೊನಾಗೆ ಹತ್ತನೇ ಬಲಿ: 35 ಕೊರೊನಾ ಪಾಸಿಟಿವ್ ಕೇಸ್‌ಗಳು ಪತ್ತೆ - Corona virus
ರಾಜ್ಯದಲ್ಲಿ ಕೋವಿಡ್ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಳವಾಗುತ್ತಿದೆ. ಇಂದು ಬಳ್ಳಾರಿ ಜಿಲ್ಲೆಯಲ್ಲಿ ಓರ್ವ ಸೋಂಕಿತ ಮೃತಪಟ್ಟಿದ್ದು, ಮತ್ತೆ 35 ಸೋಂಕಿತರು ಪತ್ತೆಯಾಗಿದ್ದಾರೆ.
Thirty five corona cases found in bellary
ಈವರೆಗೆ ಅಂದಾಜು 363 ಮಂದಿ ಜಿಂದಾಲ್ ಸಮೂಹ ಸಂಸ್ಥೆಯ ಉಕ್ಕು ಕಾರ್ಖಾನೆಯ ನೌಕರರಿಗೆ ಈ ಮಹಾಮಾರಿ ಕೊರೊನಾ ಸೋಂಕಿ ರೋದು ದೃಢಪಟ್ಟಿದೆ.
ಕೊರೊನಾ ಸೋಂಕಿತರ ಸಂಖ್ಯೆ 645 ಕ್ಕೆ ಏರಿಕೆಯಾಗಿದ್ದು, 292 ಮಂದಿ ಗುಣಮುಖರಾಗಿದ್ದಾರೆ. 10 ಮಂದಿ ಸಾವನ್ನಪ್ಪಿದರು, 344 ಸಕ್ರೀಯ ಪ್ರಕರಣಗಳಿವೆ.