ಕರ್ನಾಟಕ

karnataka

ಚಿತ್ರದುರ್ಗದಲ್ಲಿ ಇಬ್ಬರು ವೈದ್ಯಕೀಯ ಸಿಬ್ಬಂದಿ, ಪೊಲೀಸ್ ಕಾನ್ಸ್​ಟೇಬಲ್​ಗೆ ಕೊರೊನಾ ಸೋಂಕು

By

Published : Jun 13, 2020, 1:40 AM IST

ಇಂದು ಚಿತ್ರದುರ್ಗದಲ್ಲಿ ಮೂವರಿಗೆ ಕೊರೊನಾ ಸೋಂಕು ತಗುಲಿದೆ.

Chitradurga
Chitradurga

ಚಿತ್ರದುರ್ಗ: ಕೋಟೆನಾಡಿನಲ್ಲಿ‌ ಮೂರು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ಜನರಲ್ಲಿ ಆತಂಕ ಮನೆ ಮಾಡಿದೆ.

32 ವರ್ಷದ ಪಿ-6396, 41 ವರ್ಷದ ಪಿ-6397 ಹಾಗೂ 32 ವರ್ಷದ ಪಿ-6398 ಸೇರಿ ಮೂವರಿಗೆ ಸೋಂಕು ತಗುಲಿದೆ. ಸೋಂಕಿತರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಉತ್ತರ ಪ್ರದೇಶ ಮೂಲದ 27 ಸೋಂಕಿತರಿಗೆ ಚಿಕಿತ್ಸೆ ನೀಡಿದ್ದ ಇಬ್ಬರು ವೈದ್ಯಕೀಯ ಸಿಬ್ಬಂದಿ ಹಾಗೂ ಕೋಲಾರ ಜಿಲ್ಲೆಯ ಕೆಜಿಎಫ್​ನಿಂದ ಜಿಲ್ಲೆಗೆ ಆಗಮಿಸಿದ್ದ ಪೊಲೀಸ್ ಕಾನ್ಸ್​ಟೇಬಲ್ ಗೆ ಸೋಂಕು ದೃಢವಾಗಿದೆ.

ಜಿಲ್ಲೆಯಲ್ಲಿರುವ ಒಟ್ಟು 43 ಪ್ರಕರಣಗಳಲ್ಲಿ‌ 39 ಜನ ಈಗಾಗಲೇ ಕೊರೊನಾದಿಂದ ಗುಣಮುಖರಾಗಿದ್ದು, ಓರ್ವ ಯುವತಿ ಉಡುಪಿಯ ಮಣಿಪಾಲ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಳೆ.

ABOUT THE AUTHOR

...view details