ಶಿವಮೊಗ್ಗ: ಮುಂಗಾರು ಮಳೆಗೆ ತುಂಗಾ ಡ್ಯಾಂ ಒಳಹರಿವು ಹೆಚ್ಚಾಗುತ್ತಿರುವ ಕಾರಣ, ಹೆಚ್ಚುವರಿ ನೀರನ್ನು ಯಾವುದೇ ಸಂದರ್ಭದಲ್ಲಿ ಬಿಡಬಹುದಾಗಿದ್ದು ನದಿ ತೀರದ ಗ್ರಾಮಸ್ಥರ ಎಚ್ಚರಿಕೆ ವಹಿಸಲು ತಿಳಿಸಲಾಗಿದೆ.
ತುಂಗಾ ಡ್ಯಾಂ ಒಳಹರಿವು ಹೆಚ್ಚಳ: ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಗ್ರಾಮಸ್ಥರಿಗೆ ಎಚ್ಚರಿಕೆ
ತುಂಗಾ ಅಣೆಕಟ್ಟು ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆಯಾಗುತ್ತಿದೆ. ಹೀಗಾಗಿ ಅಣೆಕಟ್ಟೆಯಲ್ಲಿ ಒಳಹರಿವು ಹೆಚ್ಚಾಗುತ್ತಿದೆ. ಹೆಚ್ಚುವರಿ ನೀರನ್ನು ಹೊರಗೆ ಬಿಡುವ ಮೂನ್ಸೂಚನೆಯಿದ್ದು, ನದಿಪಾತ್ರದ ಜನರು ಸುರಕ್ಷಿತವಾಗಿರುವಂತೆ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ತುಂಗಾ ಡ್ಯಾಂ
ಅಣೆಕಟ್ಟೆಯ ಜಲಾನಯನ ಪ್ರದೇಶ ವ್ಯಾಪ್ತಿಯಲ್ಲಿ ಮುಂಗಾರು ಮಳೆಯಾಗುತ್ತಿದ್ದು, ಡ್ಯಾಂನ ಒಳಹರಿವು ಹೆಚ್ಚಾಗುತ್ತಿರುವ ಕಾರಣ ಹೆಚ್ಚುವರಿ ನೀರನ್ನು ಗೇಟುಗಳ ಮೂಲಕ ತುಂಗಾ ನದಿಗೆ ಯಾವುದೇ ಸಂದರ್ಭದಲ್ಲಿ ಬಿಡಬಹುದು.
ಅದಕ್ಕಾಗಿ ಮುಂಜಾಗ್ರತಾ ದೃಷ್ಟಿಯಿಂದ ನದಿಪಾತ್ರದ ಪ್ರದೇಶದಲ್ಲಿ ವಾಸಿಸುತ್ತಿರುವ ಗ್ರಾಮಸ್ಥರು ಹಾಗೂ ಸಾರ್ವಜನಿಕರು, ನದಿ ಪಾತ್ರದಲ್ಲಿ ಯಾವುದೇ ರೀತಿಯ ಚಟುವಟಿಕೆಗಳನ್ನು ಕೈಗೊಳ್ಳದಂತೆ, ನದಿ ದಂಡೆಯಿಂದ ಎತ್ತರದ ಪ್ರದೇಶಕ್ಕೆ ಸ್ಥಳಾಂತರಗೊಳ್ಳುವಂತೆ ಕಾರ್ಯಪಾಲಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
Last Updated : Jun 9, 2020, 3:55 PM IST