ತುಮಕೂರು ಜಿಲ್ಲೆಯಲ್ಲಿ ಹೆಚ್ಚುವರಿ 20 ಸ್ವಾಬ್ ಕಲೆಕ್ಷನ್ ಸೆಂಟರ್ ಗಳ ಕಾರ್ಯ ಆರಂಭ
ಸೋಂಕಿತರ ಸಂಖ್ಯೆ ಹೆಚ್ಚಾಳವಾಗುತ್ತಿರುವ ಹಿನ್ನೆಲೆ ತುಮಕೂರು ಜಿಲ್ಲೆಯಲ್ಲಿ ಸಾರ್ವಜನಿಕ ಗಂಟಲು ದ್ರವ ಪರೀಕ್ಷೆ ಮತ್ತು ಮೂಗಿನ ದ್ರವ ಸಂಗ್ರಹಿಸಲು ಜಿಲ್ಲೆಯಾದ್ಯಂತ 20 ಕೇಂದ್ರಗಳನ್ನ ತೆರೆಯಲಾಗಿದೆ.
ತುಮಕೂರು :ಜಿಲ್ಲೆಯಲ್ಲಿ ಸಾರ್ವಜನಿಕರ ಗಂಟಲು ಮತ್ತು ಮೂಗಿನ ದ್ರವ ಸಂಗ್ರಹಿಸಲು ಅನುಕೂಲವಾಗುವಂತೆ ಒಟ್ಟು 20 ಕೇಂದ್ರಗಳನ್ನು ತೆರೆಯಲಾಗಿದೆ.
ಪಾವಗಡ ತಾಲೂಕಿನಲ್ಲಿ ಮೂರು ಕಡೆ ಸ್ವಾಬ್ ಕಲೆಕ್ಷನ್ ಸೆಂಟರ್ಗಳನ್ನು ತೆರೆಯಲಾಗಿದೆ. ತಿರುಮಣಿ, ವೈಎನ್ ಹೊಸಕೋಟೆ ಮತ್ತು ಪಾವಗಡ ಸರ್ಕಾರಿ ಆಸ್ಪತ್ರೆಯಲ್ಲಿ ತೆರೆಯಲಾಗಿದೆ. ಗುಬ್ಬಿ ತಾಲೂಕಿನಲ್ಲಿ ಎರಡು ಕಡೆ ಸ್ವಾಬ್ ಕಲೆಕ್ಷನ್ ಸೆಂಟರ್ಗಳನ್ನು ತೆರೆಯಲಾಗಿದೆ.
ಕುಣಿಗಲ್ ತಾಲೂಕಿನ ಅಮೃತಾಪುರ, ಯಡಿಯೂರು ಮತ್ತು ಹುಲಿಯೂರುದುರ್ಗ ದಲ್ಲಿ ಸ್ವಾಬ್ ಕಲೆಕ್ಷನ್ ಸೆಂಟರ್ಗಳನ್ನು ಆರಂಭಿಸಲಾಗಿದೆ.
ಕೊರಟಗೆರೆ ತಾಲೂಕಿನ ಅಕ್ಕಿರಾಂಪುರ , ಎಲೆರಾಂಪುರ ಮತ್ತು ಕೊರಟಗೆರೆ ಸಾರ್ವಜನಿಕ ಆಸ್ಪತ್ರೆಯಲ್ಲಿ ಸ್ವಾಬ್ ಕಲೆಕ್ಷನ್ ಸೆಂಟರ್ಗಳನ್ನು ತೆರೆಯಲಾಗಿದೆ.
ತುಮಕೂರು ತಾಲೂಕಿನ ಮೂರು ಕಡೆ ಸ್ವಾಬ್ ಕಲೆಕ್ಷನ್ ಸೆಂಟರ್ಗಳನ್ನು ಆರಂಭಿಸಲಾಗಿದೆ
ಚಿಕ್ಕನಾಯಕನಹಳ್ಳಿ ತಾಲೂಕು, ತಿಪಟೂರು ತುರುವೇಕೆರೆ ತಾಲೂಕಿನಲ್ಲಿ ತಲಾ ಒಂದು ಕಡೆ ಸ್ವಾಬ್ ಕಲೆಕ್ಷನ್ ಸೆಂಟರ್ಗಳನ್ನು ಆರಂಭಿಸಲಾಗಿದೆ. ಪ್ರತಿ ಸ್ವಾಬ್ ಕಲೆಕ್ಷನ್ ಸೆಂಟರ್ಗಳಿಗೆ ವೈದ್ಯರು ಹಾಗೂ ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲಾಗಿದೆ.