ಯಾದಗಿರಿ :ಜಿಲ್ಲೆಯಲ್ಲಿಂದು ಮತ್ತೆ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.
ಗುರುಮಠಕಲ್ ಹರಿಜನವಾಡದ 50 ವರ್ಷದ ಪುರುಷ (ಪಿ -14671), ಗುರುಮಠಕಲ್ ತಾಲೂಕಿನ ಅನಪೂರ ಗ್ರಾಮದ 40 ವರ್ಷದ ಪುರುಷ (ಪಿ-14672) ಕೊರೊನಾ ಸೋಂಕಿಗೆ ತುತ್ತಾಗಿದ್ದಾರೆ.
ಯಾದಗಿರಿ ಜಿಲ್ಲೆಯಲ್ಲಿಂದು ಇಬ್ಬರು ಕೊರೊನಾ ಸೋಂಕಿತರು - Corona virus
ರಾಜ್ಯದ ಗಡಿ ಭಾಗಗಳಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದ್ವಿಗುಣವಾಗುತ್ತಿದ್ದು, ಇಂದು ಯಾದಗಿರಿ ಜಿಲ್ಲೆಯಲ್ಲಿ ಇಬ್ಬರು ಕೋವಿಡ್ ಸೋಂಕಿತರು ಪತ್ತೆಯಾಗಿದ್ದಾರೆ..
Two corona cases found in yadagiri district
ರೋಗಿ-14671ರ ವ್ಯಕ್ತಿಯ ಸಂಪರ್ಕ ಪತ್ತೆ ಹಚ್ಚಲಾಗುತ್ತಿದೆ. ಮತ್ತೊಬ್ಬರು ಅಂತಾರಾಜ್ಯ ಪ್ರಯಾಣದ ಹಿನ್ನೆಲೆ ಹೊಂದಿದ್ದು, ತೆಲಂಗಾಣ ರಾಜ್ಯದ ಹೈದರಾಬಾದ್‌ನಿಂದ ಯಾದಗಿರಿ ಜಿಲ್ಲೆಗೆ ಹಿಂದಿರುಗಿರುತ್ತಾರೆ.
ಜಿಲ್ಲೆಯಲ್ಲಿ ಒಟ್ಟು 941 ಪ್ರಕರಣ ಪೈಕಿ 837 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದು, ಒಬ್ಬರು ಮೃತಪಟ್ಟಿದ್ದಾರೆ.