ದ.ಕ ಜಿಲ್ಲೆಯ ಇಬ್ಬರು ಕೊರೊನಾಗೆ ಬಲಿ - Covid-19
ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಾಳವಾಗುತ್ತಿದ್ದು, ಇಂದು ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಬ್ಬರು ಸೋಂಕಿತರು ಕೋವಿಡ್ ಗೆ ಬಲಿಯಾಗಿದ್ದಾರೆ.
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇಂದು ಇಬ್ಬರು ಕೋವಿಡ್ ಸೋಂಕಿತರು ಮೃತಪಟ್ಟಿದ್ದಾರೆ.
ಜೋಕಟ್ಟೆ ಸಮೀಪದ ನಿವಾಸಿ ಮಹಿಳೆ(45) ಟಿಬಿ ಖಾಯಿಲೆಯಿಂದ ಬಳಲುತ್ತಿದ್ದು ಅದಕ್ಕಾಗಿ ರತ್ಕಲ್ ಕಾನ ಬಳಿಯ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದರು. ಆರೋಗ್ಯ ತೀರಾ ಹದಗೆಟ್ಟ ಕಾರಣ ಜೂ. 26ರ ಸಂಜೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ಸಂದರ್ಭದಲ್ಲಿ ಪರೀಕ್ಷೆ ನಡೆಸಿದಾಗ ಸೋಂಕು ಪತ್ತೆಯಾಗಿತ್ತು. ಸದ್ಯ ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಸಾವನ್ನಪ್ಪಿದ್ದಾರೆ.
ಮಹಿಳೆಯ ಪತಿ ದಕ್ಕೆಯಲ್ಲಿ ಮೀನು ವ್ಯಾಪಾರ ಮಾಡುತ್ತಿದ್ದು ಮನೆಯಲ್ಲಿ ವಾರದ ಹಿಂದೆ ಎಲ್ಲರಿಗೂ ಜ್ವರ ಬಂದಿತ್ತು ಎನ್ನಲಾಗಿದೆ.
ಕೊರೊನಾಗೆ ಯುವಕ ಬಲಿ
ಸುರತ್ಕಲ್ ಇಡ್ಯಾ ನಿವಾಸಿ 31 ವರ್ಷದ ಯುವಕನಿಗೆ ಆರೋಗ್ಯ ಸಮಸ್ಯೆ ಮತ್ತು ಬಿಪಿ ಇದ್ದ ಕಾರಣ ಜೂ.27 ರಂದು ಮಂಗಳೂರು ಕೋವಿಡ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು.
ಬಳಿಕ ಗಂಟಲು ದ್ರವದ ಪರೀಕ್ಷೆ ನಡೆಸಿದಾಗ ಕೊರೊನಾ ಸೋಂಕು ತಗುಲಿರುವುದು ದೃಢವಾಗಿದ್ದು ಇಂದು ಯುವಕ ಮೃತಪಟ್ಟಿದ್ದಾನೆ. ಸದ್ಯ ಇಡ್ಯಾದ ಸೋಂಕಿತನ ಮನೆಯನ್ನು ಸೀಲ್ ಡೌನ್ ಮಾಡಲಾಗಿದೆ.