ಆಗ್ರಾ:ಉತ್ತರಪ್ರದೇಶದ ಬಾರ್ ಕೌನ್ಸಿಲ್ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದ ದರವೀಶ್ ಪುಷ್ಪಾಂಜಲಿ ಯಾದವ್ ಅವರನ್ನು ವಕೀಲನೊಬ್ಬ ಹಾಡಹಗಲೇ ಗುಂಡಿಕ್ಕಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಹೊಸದಾಗಿ ಆಯ್ಕೆಯಾಗಿದ್ದ ಮಹಿಳಾ ಬಾರ್ ಕೌನ್ಸಿಲ್ ಅಧ್ಯಕ್ಷೆ ದರವೀಶ್ಪುಷ್ಪಾಂಜಲಿ ಯಾದವ್ ಅವರನ್ನು ಸ್ವಾಗತಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ ಆಕೆಯ ಮೇಲೆ ಕೋರ್ಟ್ನ ವಕೀಲನೋರ್ವ ಗುಂಡಿನ ಸುರಿಮಳೆಗೈದಿದ್ದಾನೆ. ತದನಂತರ ತಾನು ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಘಟನೆಯಿಂದ ಗಂಭೀರವಾಗಿ ಗಾಯಗೊಂಡಿರುವ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.