ವಿಜಯಪುರ :ಜಿಲ್ಲೆಯಲ್ಲಿ ಈವರೆಗೆ ಒಟ್ಟು 236 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢಪಟ್ಟಿದ್ದು, ಇಂದು ಯಾವುದೇ ಪ್ರಕರಣ ಪತ್ತೆಯಾಗಿಲ್ಲ ಎಂದು ಜಿಲ್ಲಾಧಿಕಾರಿ ವೈ.ಎಸ್. ಪಾಟೀಲ ತಿಳಿಸಿದರು.
ಈ ಕುರಿತಂತೆ ಮಾಹಿತಿ ನೀಡಿದ ಜಿಲ್ಲಾಧಿಕಾರಿಗಳು, ಜಿಲ್ಲೆಗೆ ಈವರೆಗೆ ವಿದೇಶ ಸೇರಿದಂತೆ ಇತರ ಪ್ರದೇಶಗಳಿಂದ 3,03,601 ಜನರು ಬಂದ ಬಗ್ಗೆ ವರದಿಯಾಗಿದ್ದು, ಇವರ ಮೇಲೆ ತೀವ್ರ ನಿಗಾ ಇಡಲಾಗಿದೆ ಎಂದರು.
ಇಲ್ಲಿಯವರೆಗೆ ಒಟ್ಟು 236 ಕೊರೊನಾ ಪ್ರಕರಣಗಳು ದೃಢಪಟ್ಟಿದ್ದು, 9,300 ಜನರು 28 ದಿನಗಳ ಐಸೋಲೇಶನ್ ಅವಧಿ ಪೂರ್ಣಗೊಳಿಸಿದ್ದಾರೆ. 20,859 ಜನರು (1 ರಿಂದ 28 ದಿನಗಳ) ರಿಪೋರ್ಟಿಂಗ್ ಅವಧಿಯಲ್ಲಿದ್ದಾರೆ ಎಂದು ತಿಳಿಸಿದರು.
ಈವರೆಗೆ ಜಿಲ್ಲೆಯಲ್ಲಿ 6 ಮಂದಿ ಸೋಂಕಿನಿಂದ ಮೃತಪಟ್ಟಿದ್ದು,196 ಜನರು ಕೊರೊನಾದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇನ್ನು 34 ಜನರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದರು.
ಇಲ್ಲಿಯವರೆಗೆ 26,942 ಜನರ ಗಂಟಲು ದ್ರವ ಮಾದರಿಯನ್ನು ಸಂಗ್ರಹಿಸಿದ್ದು, 26,558 ಜನರ ನೆಗೆಟಿವ್ ವರದಿ ಬಂದಿದೆ. ಇನ್ನೂ 148 ಜನರ ಗಂಟಲು ದ್ರವ ಮಾದರಿ ಪರೀಕ್ಷಾ ವರದಿ ಬರಬೇಕಾಗಿದೆ ಎಂದು ಮಾಹಿತಿ ನೀಡಿದರು.