ಕರ್ನಾಟಕ

karnataka

ETV Bharat / briefs

ಕೊರೊನಾ ಸೋಂಕಿತನ ಶವ ಸಂಸ್ಕಾರಕ್ಕೆ ಗ್ರಾಮಸ್ಥರ ವಿರೋಧ - Gadag Corona news

ಮೃತನ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ, ಆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ..

Gadag
Gadag

By

Published : May 21, 2021, 3:02 PM IST

ಗದಗ : ಕೊರೊನಾದಿಂದ ಸಾವನ್ನಪ್ಪಿದ್ದ ವ್ಯಕ್ತಿಯ ಶವಸಂಸ್ಕಾರ ನಡೆಸಲು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ ಅಮಾನವೀಯ ಘಟನೆ ರೋಣ ತಾಲೂಕಿನ ಅಮರಗೋಳದಲ್ಲಿ ನಡೆದಿದ್ದು, ಇದು ತಡವಾಗಿ ಬೆಳಕಿಗೆ ಬಂದಿದೆ.

ಮೂಲತಃ ಅಮರಗೋಳ ಗ್ರಾಮದ 72 ವರ್ಷದ ವ್ಯಕ್ತಿಯೊಬ್ಬರು ಕೊರೊನಾ ಸೋಂಕಿಗೆ ಬಲಿಯಾಗಿದ್ದರು. ಈ ವ್ಯಕ್ತಿ ಬಾಗಲಕೋಟೆ ಜಿಲ್ಲೆಯಲ್ಲಿ ಕೆಲಸ ಮಾಡುತ್ತಿದ್ದು, ಈ ಸಂದರ್ಭದಲ್ಲಿ ಕೊರೊನಾಗೆ ತುತ್ತಾಗಿದ್ದಾರೆ. ಹೀಗಾಗಿ, ಅವರನ್ನು ಇಲ್ಲಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ.

ಮೃತನ ಅಂತ್ಯಸಂಸ್ಕಾರ ಮಾಡಲು ಕುಟುಂಬಸ್ಥರು ಹುಟ್ಟೂರಿಗೆ ತೆಗೆದುಕೊಂಡು ಹೋಗಿದ್ದಾರೆ. ಆದರೆ, ಆ ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ. ನಂತರ ಜೆಸಿಬಿ ಮೂಲಕ ತಮ್ಮ ಸ್ವಂತ ಜಮೀನಿನಲ್ಲಿಯೇ ಸಂಬಂಧಿಕರು ಅಂತ್ಯ ಸಂಸ್ಕಾರ ಮಾಡಿದ್ದಾರೆ ಎಂದು ತಿಳಿದು ಬಂದಿದೆ.

ABOUT THE AUTHOR

...view details