ಧಾರವಾಡ: ಲೋಕಸಭಾ ಚುನಾವಣೆಗೆಟಿಕೆಟ್ಪಡೆಯಲು ಪ್ಲಾನ್ ರೂಪಿಸಿರುವ ಮಾಜಿ ಸಚಿವವಿನಯ್ ಕುಲಕರ್ಣಿ ಗೆ ಇಲ್ಲಿಯವರೆಗೆ ಯಾವುದೇ ರೀತಿಯ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ. ಇದರ ಮಧ್ಯೆ ಕಳೆದ ಕೆಲ ದಿನಗಳ ಹಿಂದೆ ಧಾರವಾಡದಲ್ಲಿ ನಡೆದ ಕಟ್ಟಡ ದುರಂತದಿಂದ ಮಾಜಿ ಸಚಿವ ಕುಲಕರ್ಣಿಗೆ ಟಿಕೆಟ್ ಕೈ ತಪ್ಪುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ.
ಧಾರವಾಡದಲ್ಲಿ ಟಿಕೆಟ್ ಕೈತಪ್ಪುವ ಸಾಧ್ಯತೆ: ಕುಲಕರ್ಣಿ ಪರ ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ - ವಿನಯ್ ಕುಲಕರ್ಣಿ
ಧಾರವಾಡ ಎಂಪಿ ಟಿಕೆಟ್‌ಗಾಗಿ ವಿನಯ್ ಕುಲಕರ್ಣಿ ಹಾಗೂ ಶಾಖಿರ್ ಸನದಿ ನಡುವೆ ಫೈಟ್ ಏರ್ಪಟ್ಟಿದೆ. ಮಾಜಿ ಸಿಎಂ ಸಿದ್ದರಾಮಯ್ಯ ಆಪ್ತರಾದ ಮಾಜಿ ಸಚಿವ ವಿನಯ್ ಕುಲಕರ್ಣಿ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಆದ್ರೆ ಟಿಕೆಟ್ ಸಿಗೋ ನಿರೀಕ್ಷೆಯಲ್ಲಿದ್ದ ಅವರಿಗೆ ಇಲ್ಲಿಯವರೆಗೆ ಹೈಕಮಾಂಡ್ನಿಂದ ಗ್ರೀನ್ ಸಿಗ್ನಲ್ ಸಿಕ್ಕಿಲ್ಲ.
ಕುಲಕರ್ಣಿ ಪರ ಅಭಿಯಾನ
ಈ ಹಿನ್ನೆಲೆಯಲ್ಲಿ ವಿನಯ ಕುಲಕರ್ಣಿಗೆ ಟಿಕೆಟ್ ನೀಡುವಂತೆ ಅಭಿಯಾನ ಆರಂಭಗೊಂಡಿದೆ. ವಿನಯ ಕುಲಕರ್ಣಿ ಬೆಂಬಲಿಗರಿಂದ ಅಭಿಯಾನ ಆರಂಭವಾಗಿದ್ದು, ಸೋಶಿಯಲ್ ಮೀಡಿಯಾದಲ್ಲಿ ಅಭಿಯಾನ ಆರಂಭಗೊಂಡಿದೆ.
ಧಾರವಾಡ ಲೋಕಸಭಾ ಟಿಕೆಟ್ ವಿನಯ ಕುಲಕರ್ಣಿಗೆ ನೀಡುವಂತೆ ಬೆಂಬಲಿಗರ ಸೋಷಿಯಲ್ ಮೀಡಿಯಾದಲ್ಲಿ ಆಗ್ರಹಿಸಿದ್ದಾರೆ. ಕುಲಕರ್ಣಿಗೆ ಟಿಕೆಟ್ ನೀಡಿ ಕಾಂಗ್ರೆಸ್ ಪಕ್ಷವನ್ನು ಗೆಲ್ಲಿಸಿ ಅಂತಾ ಅಭಿಯಾನ ಆರಂಭಿಸಿದ್ದಾರೆ. ವಾಟ್ಸಾಪ್ ಮತ್ತು ಫೇಸ್‌ಬುಕ್‌ನಲ್ಲಿ ವಿನಯ ಅಭಿಮಾನಿಗಳು ಅಭಿಯಾನ ಪ್ರಾರಂಭಿಸಿದ್ದಾರೆ.