ಲಂಡನ್:ವಿಶ್ವಕಪ್ ಆರಂಭಕ್ಕೂ ಮುನ್ನ ನಡೆದ ಎರಡು ಅಭ್ಯಾಸ ಪಂದ್ಯಗಳಲ್ಲಿ ಟೀಂ ಇಂಡಿಯಾದ ಆರಂಭಿಕ ಬ್ಯಾಟ್ಸ್ಮನ್ಗಳಾದ ರೋಹಿತ್,ಶಿಖರ್ ಬ್ಯಾಟಿಂಗ್ ವೈಫಲ್ಯ ಅನುಭವಿಸಿರುವುದು ನಾಯಕನ ನಿದ್ದೆಗೆಡಿಸಿದೆ.
ನಿನ್ನೆ ಬಾಂಗ್ಲಾ ವಿರುದ್ಧ ನಡೆದ ಪಂದ್ಯದಲ್ಲೂ ಶಿಖರ್,ರೋಹಿತ್ ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿದ್ದು, ಇದೇ ವಿಷಯವಾಗಿ ಕೊಹ್ಲಿ ಮಾತನಾಡಿದ್ದಾರೆ. ಐಸಿಸಿ ಟೂರ್ನಿಯಲ್ಲಿ ಇಬ್ಬರು ಪ್ಲೇಯರ್ಸ್ ಉತ್ತಮ ಪ್ರದರ್ಶನ ನೀಡಿದ್ದಾರೆ. ಅವರಿಬ್ಬರ ಬ್ಯಾಟಿಂಗ್ ಸಾಮರ್ಥ್ಯದ ಬಗ್ಗೆ ನನಗೆ ಗೊತ್ತಿದ್ದು, ಉತ್ತಮ ಪ್ರದರ್ಶನ ನೀಡಲಿದ್ದಾರೆ ಎಂದು ತಿಳಿಸಿದ್ದಾರೆ.
ಇದೇ ವೇಳೆ ಅಭ್ಯಾಸ ಪಂದ್ಯಗಳಲ್ಲಿ ಉತ್ತಮ ಪ್ರದರ್ಶನ ನೀಡದೆ ಹೋದರೆ ಮಹತ್ವದ ಟೂರ್ನಿಯಲ್ಲಿ ಬ್ಯಾಟ್ ಮಾಡುವಾಗ ನಮಗೆ ಆತ್ಮವಿಶ್ವಾಸದ ಕೊರತೆ ಕಾಡಲು ಶುರುವಾಗುತ್ತದೆ. ಈಗಾಗಲೇ ಆಡಿರುವ ಎರಡು ಪಂದ್ಯಗಳಿಂದ ಅನೇಕ ಪಾಠ ಕಲಿತುಕೊಂಡಿದ್ದಾಗಿ ತಿಳಿಸಿದ್ದಾರೆ.
ಟೂರ್ನಿ ಆರಂಭಗೊಳ್ಳುತ್ತಿದ್ದಂತೆ ರನ್ ಚೇಸ್ ಮಾಡಲು ನಾವು ಓಪನರ್ ಮೇಲೆ ಹೆಚ್ಚಿನ ನಿರೀಕ್ಷೆಯಿಡುತ್ತೇವೆ. ಹೀಗಾಗಿ ಅವರು ಫಾರ್ಮ್ಗೆ ಮರಳಬೇಕಾದ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ. ಟೀಂ ಇಂಡಿಯಾ ವಿಶ್ವಕಪ್ನಲ್ಲಿ ಜೂನ್ 5ರಂದು ದಕ್ಷಿಣ ಆಫ್ರಿಕಾದೊಂದಿಗೆ ಸೆಣಸುವ ಮೂಲಕ ಅಭಿಯಾನ ಆರಂಭ ಮಾಡಲಿದೆ.
ಅಭ್ಯಾಸ ಪಂದ್ಯಗಳಲ್ಲಿ ಶಿಖರ್ 2,1 ಸಿಂಗಲ್ ಡಿಜಿಟ್ರನ್ಗಳಿಕೆ ಮಾಡಿದರೆ, ರೋಹಿತ್ ಶರ್ಮಾ 2,19 ರನ್ ಗಳಿಕೆ ಮಾಡಿ ನಿರಾಸೆ ಮೂಡಿಸಿದ್ದರು.