ಚಿತ್ರದುರ್ಗ: ಜಿಲ್ಲಾ ಕೇಂದ್ರದಿಂದ ಕೂಗಳತೆ ದೂರವಿರುವ ಒಂದು ಪುಟ್ಟ ಗ್ರಾಮ. ಅಲ್ಲಿ ಗ್ರಾಮ ಪಂಚಾಯತ್ ಇದ್ದರೂ ಇಲ್ಲದಂತಾಗಿದೆ. ಕುಡಿಯುವ ನೀರಿಗಾಗಿ ಗ್ರಾಮಸ್ಥರು ಗೋಳಾಡುವ ಸ್ಥಿತಿ ನಿರ್ಮಾಣವಾಗಿದೆ.
ಜಿಲ್ಲೆಯ ಓಬಣ್ಣನ ಹಳ್ಳಿಯಲ್ಲಿ ಕುಡಿಯುವ ನೀರಿನ ಸಮಸ್ಯೆ ಬಹು ವರ್ಷಗಳಿಂದ ತಲೆದೋರಿದೆ. ಹನಿ ನೀರಿಗಾಗಿ ಈ ಗ್ರಾಮದ ಜನರು ಒಂದೆರೆಡು ಕಿಲೋಮೀಟರ್ ದೂರ ಸಂಚರಿಸಿ ನೀರನ್ನು ಸೇದುವ ಪರಿಸ್ಥಿತಿ ನಿರ್ಮಾಣವಾಗಿತ್ತು. ಆದರೆ, ಈ ಸಮಸ್ಯೆಯನ್ನು ಬಗೆಹರಿಸಿಕೊಳ್ಳಲು ಗ್ರಾಮಸ್ಥರು ಲೋಕಸಭೆ ಚುನಾವಣೆಯ ಮತದಾನವನ್ನು ಬಹಿಷ್ಕರಿಸಿದ್ದರು. ಗ್ರಾಮದಲ್ಲಿರುವ ಕುಡಿಯುವ ನೀರಿನ ಸಮಸ್ಯೆ ಹೋಗಲಾಡಿಸಬೇಕೆಂದು ಅಧಿಕಾರಿಗಳ ಮುಂದೆ ಬೇಡಿಕೆಯಿಟ್ಟ ಬೆನ್ನಲ್ಲೇ ಅಧಿಕಾರಿಗಳು ಖಾಸಗಿ ಬೋರ್ವೆಲ್ನ ಬಾಡಿಗೆಗೆ ಪಡೆದು ಕುಡಿಯುವ ನೀರಿನ ಸಮಸ್ಯೆಯನ್ನು ಸ್ವಲ್ಪ ಮಟ್ಟಿಗೆ ನೀಗಿಸಿದ್ದಾರೆ.