ಕರ್ನಾಟಕ

karnataka

ETV Bharat / briefs

ಬೆಳಗಾವಿ ಜಿಲ್ಲೆಯ ಜನಸಂಖ್ಯೆ ಆಧರಿಸಿ ಹೆಚ್ಚುವರಿ ಲಸಿಕೆ; ಸಿಎಂ - ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ

ಕೋವಿಡ್ ನಿರ್ವಹಣೆ ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರು ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಚರ್ಚಿಸಿ ಸ್ಥಳೀಯವಾಗಿ ಬಗೆಹರಿಸಿಕೊಳ್ಳುವುದು ಪರಿಣಾಮಕಾರಿಯಾಗಲಿದೆ ಎಂದು ಬಿಎಸ್​ವೈ ಹೇಳಿದ್ದಾರೆ.

We stand for Measures to strengthen education and health sector: BSY
We stand for Measures to strengthen education and health sector: BSY

By

Published : Jun 4, 2021, 4:51 PM IST

ಬೆಳಗಾವಿ: ಕೋವಿಡ್ ಸಮರ್ಪಕ ನಿರ್ವಹಣೆಗಾಗಿ ಆಕ್ಸಿಜನ್, ಲಸಿಕೆ ಪೂರೈಕೆಗೆ ಸರ್ಕಾರ ಎಲ್ಲ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಮುಂಬರುವ ದಿನಗಳಲ್ಲಿ ರಾಜ್ಯದಲ್ಲಿ ಶಿಕ್ಷಣ ಹಾಗೂ ಆರೋಗ್ಯ ಕ್ಷೇತ್ರಗಳ ಬಲವರ್ಧನೆಗೆ ಹೆಚ್ಚಿನ ಅನುದಾನ ಒದಗಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಕೋವಿಡ್ ನಿರ್ವಹಣೆ ಹಾಗೂ ಇತರೆ ಅಭಿವೃದ್ಧಿ ವಿಷಯಗಳ ಕುರಿತು ಸುವರ್ಣ ವಿಧಾನ ಸೌಧದಲ್ಲಿ ನಡೆದ ಜಿಲ್ಲೆಯ ಜನಪ್ರತಿನಿಧಿಗಳು ಹಾಗೂ ಹಿರಿಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೆಳಗಾವಿ ಜಿಲ್ಲೆಯ ಜನಸಂಖ್ಯೆಗೆ ಅನುಗುಣವಾಗಿ ಹೆಚ್ಚಿನ ಪ್ರಮಾಣದಲ್ಲಿ ಲಸಿಕೆಗಳನ್ನು ಒದಗಿಸಲು ನಿರ್ಧರಿಸಲಾಗಿದೆ. ಈ ಬಗ್ಗೆ ಆರೋಗ್ಯ ಇಲಾಖೆಯ ಸಚಿವರ ಜತೆ ಚರ್ಚಿಸಿ ಸೂಚನೆಯನ್ನು ನೀಡಲಾಗಿದೆ. ಕೋವಿಡ್ ನಿರ್ವಹಣೆ ಸೇರಿದಂತೆ ಜಿಲ್ಲೆಗೆ ಸಂಬಂಧಿಸಿದ ಸಮಸ್ಯೆಗಳನ್ನು ಶಾಸಕರು ಜಿಲ್ಲೆಯ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಚರ್ಚಿಸಿ ಸ್ಥಳೀಯವಾಗಿ ಬಗೆಹರಿಸಿಕೊಳ್ಳುವುದು ಪರಿಣಾಮಕಾರಿಯಾಗಲಿದೆ. ಆದ್ದರಿಂದ ಏನೇ ಅಹವಾಲು ಅಥವಾ ಸಮಸ್ಯೆಗಳು ಇದ್ದರೆ ಉಸ್ತುವಾರಿ ಸಚಿವರ ಜತೆ ಚರ್ಚಿಸಬೇಕು ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಹೇಳಿದರು.

24 ಗಂಟೆಗಳಲ್ಲಿ ಮುಂದಿನ ಕಂತು ಬಿಡುಗಡೆ ಭರವಸೆ:
ಪ್ರವಾಹ ಸಂದರ್ಭದಲ್ಲಿ ಹಾನಿಗೊಳಗಾದ ಮನೆಗಳ ನಿರ್ಮಾಣಕ್ಕೆ ಬಿಡುಗಡೆಯಾದ ಹಣ ಬಳಸಿಕೊಂಡ ಸರ್ಟಿಫಿಕೇಟ್ ನೀಡಿದರೆ 24 ಗಂಟೆಗಳಲ್ಲಿ ನಂತರದ ಕಂತು ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಭರವಸೆ ನೀಡಿದರು.

ಬೆಳಗಾವಿಗೆ 144 ವೈದ್ಯರ ನೇಮಕಾತಿ:
ಜಿಲ್ಲೆಗೆ ಏಳು ಆಕ್ಸಿಜನ್ ಘಟಕಗಳನ್ನು ಮುಖ್ಯಮಂತ್ರಿಗಳು ಮಂಜೂರು ಮಾಡಿದ್ದಾರೆ. ಆದಷ್ಟು ಬೇಗನೇ ಈ ಘಟಕಗಳು ಕಾರ್ಯಾರಂಭಿಸಲಿವೆ. ಜಿಲ್ಲೆಗೆ ಒಟ್ಟು 144 ವೈದ್ಯರನ್ನು ನೇಮಿಸಲಾಗಿದೆ. ಇದರಲ್ಲಿ 54 ಜನರು ತಜ್ಞರನ್ನು ನಿಯೋಜಿಸಲಾಗಿದೆ. ದೇಶದಲ್ಲಿ ಅತೀ ಹೆಚ್ಚು ಕೋವಿಡ್ ಪರೀಕ್ಷೆಯನ್ನು ರಾಜ್ಯದಲ್ಲಿ ಮಾಡಲಾಗುತ್ತಿದ್ದು, ಇದುವರೆಗೆ ಮೂರು ಕೋಟಿ ಮಾದರಿ ಪರೀಕ್ಷೆ ಮಾಡಲಾಗಿದೆ ಎಂದು ಸಚಿವ ಡಾ.ಸುಧಾಕರ್ ತಿಳಿಸಿದರು.

ABOUT THE AUTHOR

...view details