ಕೋಲ್ಕತ್ತಾ:ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ವಿರುದ್ಧ ಸ್ಪರ್ಧೆ ಮಾಡಿ ಅಮೇಠಿಯಲ್ಲಿ ಸ್ಮೃತಿ ಇರಾನಿ ಭರ್ಜರಿ ಗೆಲುವು ದಾಖಲು ಮಾಡಿದ್ದು, ಇದರ ಬೆನ್ನಲ್ಲೇ ಬಿಜೆಪಿ ಕಾರ್ಯಕರ್ತನೊಬ್ಬನ ದಾರುಣ ಹತ್ಯೆ ಮಾಡಲಾಗಿತ್ತು. ಇದೀಗ ಅಂತಹ ಘಟನೆ ಪಶ್ಚಿಮ ಬಂಗಾಳದಲ್ಲೂ ನಡೆದಿದೆ.
ನಿನ್ನೆ ಅಮೇಠಿಯಲ್ಲಿ, ಇದೀಗ ದೀದಿ ನಾಡಲ್ಲೂ ಬಿಜೆಪಿ ಕಾರ್ಯಕರ್ತನ ಕಗ್ಗೊಲೆ
ಲೋಕಸಭಾ ಚುನಾವಣೆ ಮುಕ್ತಾಯಗೊಂಡಿದ್ದರೂ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ಕಾರ್ಯಕರ್ತರ ಮೇಲಿನ ಹಲ್ಲೆ ಮುಂದುವರೆದಿದ್ದು, ಇದೀಗ ದುಷ್ಕರ್ಮಿಗಳು ಪಕ್ಷದ ಕಾರ್ಯಕರ್ತನೊಬ್ಬನ ಕೊಲೆ ಮಾಡಿದ್ದಾರೆ.
ಪಶ್ಚಿಮ ಬಂಗಾಳದ 24 ಪರಗಣ ಜಿಲ್ಲೆ ಭಾತಾಪರ್ ಗ್ರಾಮದಲ್ಲಿ ಬಿಜೆಪಿ ಕಾರ್ಯಕರ್ತನ ಕೊಲೆಯಾಗಿದೆ. ಸಾವನ್ನಪ್ಪಿರುವ ವ್ಯಕ್ತಿಯನ್ನ ಚಂದನ ಶಾ ಎಂದು ಗುರುತಿಸಲಾಗಿದ್ದು, ನಿನ್ನೆ ತಡರಾತ್ರಿ ಈತನ ಕೊಲೆ ಮಾಡಲಾಗಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಲೋಕಸಭಾ ಚುನಾವಣೆ ಫಲಿತಾಂಶ ಹೊರಬಿದ್ದ ಬಳಿಕೂ ಪಶ್ಚಿಮ ಬಂಗಾಳದಲ್ಲಿ ಹಿಂಸಾಚಾರ ಮುಂದುವರೆದಿದ್ದು, ಇದೀಗ ದೀದಿ ಸರ್ಕಾರದ ವಿರುದ್ಧ ಬಿಜೆಪಿ ಪ್ರತಿಭಟನೆ ನಡೆಸುತ್ತಿದೆ. ಈ ಸಲದ ಲೋಕಸಭಾ ಚುನಾವಣೆಯಲ್ಲಿ ಪಶ್ಚಿಮ ಬಂಗಾಳದಲ್ಲಿ ಬಿಜೆಪಿ 18 ಕ್ಷೇತ್ರಗಳಲ್ಲಿ ಗೆಲುವು ದಾಖಲು ಮಾಡಿದೆ. ಅಮೇಠಿಯಲ್ಲಿ ಸ್ಮೃತಿ ಇರಾನಿ ಬೆಂಬಲಿಗ ಸುರೇಂದ್ರ ಸಿಂಗ್ನನ್ನ ಗುಂಡಿಕ್ಕಿ ಕೊಲೆ ಮಾಡಲಾಗಿತ್ತು.