ಮಂಗಳೂರು:ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ತಲಪಾಡಿ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಗಾಂಜಾ ಮಾರಾಟ: ವ್ಯಕ್ತಿಯ ಬಂಧನ - ಗಾಂಜಾ ವಶ
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಿ ಮೂಡ ಗ್ರಾಮದ ತಲಪಾಡ ಎಂಬಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಕುಕ್ಕಾಜೆಯ ಸಂಶುದ್ದೀನ್ ಎಂಬಾತನನ್ನು ಬಂಧಿಸಲಾಗಿದೆ.
ಬಂಧಿತ ಆರೋಪಿ ಸಂಶುದ್ದೀನ್
ತಾಲೂಕಿನ ಮಂಚಿ ಗ್ರಾಮದ ಕುಕ್ಕಾಜೆಯ ಸಂಶುದ್ದೀನ್ (25) ಬಂಧಿತ ಆರೋಪಿಯಾಗಿದ್ದಾನೆ. ಈತನ ಬಳಿಯಿದ್ದ 40 ಸಾವಿರ ರೂ. ಮೌಲ್ಯದ 1 ಕೆಜಿಗೂ ಹೆಚ್ಚಿನ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಆರೋಪಿಯ ಬಳಿಯಿದ್ದ ಮೊಬೈಲ್ ಫೋನ್, ನಗದು 110 ರೂ. ವಶಪಡಿಸಿಕೊಂಡಿದ್ದು, ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.