ಕರ್ನಾಟಕ

karnataka

ETV Bharat / briefs

ಕುಮಾರಣ್ಣ ಸರ್ಕಾರ ಉಳಿಸಿಕೊಳ್ತಾರಾ, ಸರ್ಕಾರದ ಆಸ್ತಿ ಉಳಿಸಿಕೊಳ್ತಾರಾ? : ಈಶ್ವರಪ್ಪ ಆಕ್ರೋಶ - undefined

ಕುಮಾರಸ್ವಾಮಿ ಸರ್ಕಾರ ಉಳಿಸಿಕೊಳ್ಳುತ್ತಾರೋ ಅಥವಾ ಸರ್ಕಾರದ ಆಸ್ತಿ ಉಳಿಸಿಕೊಳ್ಳುತ್ತಾರೋ ಎಂದು ತೀರ್ಮಾನಿಸಲಿ ಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸಿಎಂ ಕುಮಾರಸ್ವಾಮಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈಶ್ವರಪ್ಪ

By

Published : Jun 17, 2019, 1:31 AM IST

ಕೊಪ್ಪಳ :3 ಸಾವಿರ ಕೋಟಿ ರೂ. ಬೆಲೆ ಬಾಳುವ ಭೂಮಿಯನ್ನು ರಾಜ್ಯ ಸರ್ಕಾರ ಜಿಂದಾಲ್​ಗೆ ನೀಡಲು ಮುಂದಾಗಿದೆ. ಸರ್ಕಾರದ ಈ ನಡೆಯನ್ನು ಕೇವಲ ಬಿಜೆಪಿ ಮಾತ್ರವಲ್ಲ, ಪಕ್ಷಾತೀತವಾಗಿ ಎಲ್ಲರೂ ಇದನ್ನು ವಿರೋಧ ಮಾಡುತ್ತಿದ್ದಾರೆಎಂದು ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಸರ್ಕಾರದ ವಿರುದ್ಧ ಗುಡುಗಿದ್ದಾರೆ.

ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಈಶ್ವರಪ್ಪ, ಡಿ.ಕೆ.ಶಿವಕುಮಾರ್ ಕನಕಪುರದಲ್ಲಿನ ತಮ್ಮ ಆಸ್ತಿಯನ್ನು ಬೇಕಾದರೆ ಮಾರಾಟ ಮಾಡಲಿ. ರಾಜ್ಯದ ಆಸ್ತಿ ಮಾರಾಟ ಮಾಡುವ ಹಕ್ಕನ್ನು ಇವರಿಗೆ ಕೊಟ್ಟಿದ್ದು ಯಾರು ಎಂದು ಪ್ರಶ್ನಿಸಿದರು.

ಬಿಜೆಪಿ ಮುಖಂಡ ಕೆ.ಎಸ್.ಈಶ್ವರಪ್ಪ ಆಕ್ರೋಶ

ಹೀಗೆ ಬಿಟ್ಟರೆ ರಾಜ್ಯದ ಆಸ್ತಿ ಮತ್ತು ವಿಧಾನಸೌಧವನ್ನು ಅವರು ಮಾರಾಟ ಮಾಡುತ್ತಾರೆ. ಬಳ್ಳಾರಿಯಿಂದ ಪಾದಯಾತ್ರೆ ಮಾಡಿದ ಸಿದ್ದರಾಮಯ್ಯ ಇಂತಹ ಸಂದರ್ಭದಲ್ಲಿ ಎಲ್ಲಿ ಹೋದರು? ಭೂಮಿ ನೀಡುವುದನ್ನು ವಿರೋಧಿಸಿ ಬಿಜೆಪಿ ಪ್ರತಿಭಟನೆ ನಡೆಸಿದ ಸಂದರ್ಭ ಮುಖಂಡರನ್ನು ಅರೆಸ್ಟ್ ಮಾಡಲಾಗಿದೆ. ಇದಕ್ಕೆ ನಾವು ಹೆದರೋಲ್ಲ. ಸರ್ಕಾರದ ಆಸ್ತಿ ಉಳಿಸಲು ಬಿಜೆಪಿಯವರು ರಾಜ್ಯದ ಎಲ್ಲ ಜೈಲುಗಳನ್ನು ಭರ್ತಿ ಮಾಡುತ್ತೇವೆ ಎಂದು ಗುಡುಗಿದರು.

ಜಿಂದಾಲ್​ಗೆ ಭೂಮಿ ನೀಡಿದ ವಿಚಾರಕ್ಕೆ ಸಂಬಂಧಪಟ್ಟಂತೆ ಸಿಎಂ ಸರ್ವಪಕ್ಷ ಸಭೆ ಕರೆಯುವುದಾಗಿ ಕೇವಲ ಹೇಳಿಕೆ ಕೊಡುವುದಲ್ಲ. ವಿರೋಧ ಮಾಡುವ ಎಲ್ಲಾ ಪಕ್ಷದ, ನಾಯಕರು ಮತ್ತು ಸಾಮಾಜಿಕ ಕಾರ್ಯಕರ್ತರನ್ನು ಸಭೆಗೆ ಕರೆಯಬೇಕು. ಸಿಎಂ ಕುಮಾರಸ್ವಾಮಿ ಮಾಧ್ಯಮದ ವಿರುದ್ಧ ಹೋಗುತ್ತಿದ್ದಾರೆ. ಇದು ಒಳ್ಳೆಯ ಬೆಳವಣಿಗೆಯಲ್ಲ. ಇದು ಹೀಗೆ ಮುಂದುವರೆದರೆ ಅವರು ಸಿಎಂ ಕುರ್ಚಿ ಕಳೆದುಕೊಳ್ಳುತ್ತಾರೆ ಎಂದು ಎಚ್ಚರಿಸಿದರು.

For All Latest Updates

TAGGED:

ABOUT THE AUTHOR

...view details