ಕರ್ನಾಟಕ

karnataka

ಸೋಂಕಿತ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ನಡೆಸಲಾಗುವುದು: ಡಿಸಿ ಎಂ. ಕೂರ್ಮಾ ರಾವ್

ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಹಿನ್ನೆಲೆ ಯಾದಗಿರಿ ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ ಮತ್ತು ಸೋಂಕಿತ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ ನೀಡಲಾಗುವುದು ಎಂದು ಡಿಸಿ ಎಂ. ಕೂರ್ಮಾ ರಾವ್ ಮಾಹಿತಿ ನೀಡಿದರು.

By

Published : Jun 22, 2020, 8:34 PM IST

Published : Jun 22, 2020, 8:34 PM IST

Yadagiri district sslc examination preparation
Yadagiri district sslc examination preparation

ಯಾದಗಿರಿ: ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಯನ್ನು ಜೂನ್ 25ರಿಂದ ಜುಲೈ 4ರವರೆಗೆ ನಡೆಸಲು ಸರ್ಕಾರ ಹೊರಡಿಸಿರುವ ಎಸ್.ಒ.ಪಿ ಪ್ರಕಾರ ಜಿಲ್ಲೆಯಾದ್ಯಂತ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಅವರು ತಿಳಿಸಿದರು.

ಜಿಲ್ಲಾಧಿಕಾರಿಗಳ ವೀಡಿಯೊ ಕಾನ್ಫ್‍ರೆನ್ಸ್ ಸಭಾಂಗಣದಲ್ಲಿ ಕೋವಿಡ್-19 ಹಿನ್ನೆಲೆಯಲ್ಲಿ 2019-20ನೇ ಸಾಲಿನ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಸಂಬಂಧ ಪೋಷಕರು ಮತ್ತು ವಿದ್ಯಾರ್ಥಿಗಳು ಅನುಸರಿಸಬೇಕಾದ ಸುರಕ್ಷತಾ ಕ್ರಮಗಳ ಕುರಿತಂತೆ ಕರಪತ್ರ ಹಾಗೂ ಭಿತ್ತಿಪತ್ರಗಳನ್ನು ಬಿಡುಗಡೆ ಮಾಡಿ ಮಾತನಾಡಿದ ಅವರ, ಜಿಲ್ಲೆಯಲ್ಲಿ 52 ಮುಖ್ಯ ಪರೀಕ್ಷಾ ಕೇಂದ್ರಗಳು ಮತ್ತು 7 ಉಪ ಪರೀಕ್ಷಾ ಕೇಂದ್ರಗಳನ್ನು ರಚಿಸಲಾಗಿದ್ದು, ಒಟ್ಟು 870 ಪರೀಕ್ಷಾ ಕೊಠಡಿಗಳನ್ನು ಸಿದ್ಧಪಡಿಸಿಕೊಳ್ಳಲಾಗಿದೆ.

ಒಟ್ಟು 17,396 ಮಕ್ಕಳು ಪರೀಕ್ಷೆಗೆ ಹಾಜರಾಗುತ್ತಿದ್ದು, ಪರೀಕ್ಷೆಯನ್ನು ಪಾರದರ್ಶಕವಾಗಿ ನಡೆಸಲು ಎಲ್ಲಾ ಕೊಠಡಿಗಳಿಗೆ ಸಿ.ಸಿ ಟಿವಿ ಕ್ಯಾಮರಾಗಳನ್ನು ಅಳವಡಿಸಲಾಗಿದೆ. ವಿದ್ಯಾರ್ಥಿಗಳು ಸಾಮಾಜಿಕ ಅಂತರ ಕಾಯ್ದುಕೊಳ್ಳುವುದರೊಂದಿಗೆ ನಿರಾತಂಕವಾಗಿ ಪರೀಕ್ಷೆ ಬರೆಯುವಂತೆ ಅವರು ಸಲಹೆ ನೀಡಿದರು.

ಬೆಳಿಗ್ಗೆ 8 ಗಂಟೆಯಿಂದಲೇ ಪ್ರವೇಶಕ್ಕೆ ಅವಕಾಶ ನೀಡಿದ್ದು, ಪ್ರವೇಶದ ಸಂದರ್ಭದಲ್ಲಿ ಜ್ವರ ತಪಾಸಣೆಗಾಗಿ ಪ್ರತಿ ಕೇಂದ್ರದಲ್ಲಿ ಸ್ಕ್ರೀನಿಂಗ್ ಕೌಂಟರ್ ಸ್ಥಾಪಿಸಲಾಗಿದೆ. ಅಲ್ಲಿ ಸ್ಯಾನಿಟೈಸ್ ಮಾಡುವ ಜೊತೆಗೆ ಪ್ರತಿ ವಿದ್ಯಾರ್ಥಿಗೆ ಮಾಸ್ಕ್ ವಿತರಿಸಲಾಗುವುದು ಎಂದು ಮಾಹಿತಿ ನೀಡಿದರು.

ಪಾಸಿಟಿವ್ ವಿದ್ಯಾರ್ಥಿಗಳಿಗೆ ಪೂರಕ ಪರೀಕ್ಷೆ

ಒಂದು ವೇಳೆ ವಿದ್ಯಾರ್ಥಿ ಕೋವಿಡ್ ಪಾಸಿಟಿವ್ ಎಂದು ಈಗಾಗಲೇ ಗುರುತಿಸಲ್ಪಟ್ಟಿದ್ದಲ್ಲಿ ಅಂತಹ ವಿದ್ಯಾರ್ಥಿಗೆ ಪೂರಕ ಪರೀಕ್ಷೆ ಬರೆಯಲು ಅವಕಾಶ ನೀಡಿ ಅದನ್ನು 'ಪ್ರಥಮ ಅವಕಾಶ' ಎಂದು ಪರಿಗಣಿಸಲಾಗುವುದು ಎಂದು ಜಿಲ್ಲಾಧಿಕಾರಿಗಳು ಮಾಹಿತಿ ನೀಡಿದರು.

ABOUT THE AUTHOR

...view details