ETV Bharat Karnataka

ಕರ್ನಾಟಕ

karnataka

ETV Bharat / briefs

ರಾಯಚೂರು ವಿಶ್ವವಿದ್ಯಾಲಯಕ್ಕೆ ಜಮೀನು: ಉದ್ಯೋಗಕ್ಕಾಗಿ ಡಿಸಿ ಮೊರೆ ಹೋದ ಗ್ರಾಮಸ್ಥರು - undefined

ನೂತನವಾಗಿ ಆರಂಭವಾಗಲಿರುವ ರಾಯಚೂರು ವಿಶ್ವವಿದ್ಯಾಲಯದಲ್ಲಿ ಯರಗೇರಾ ಹಾಗೂ ಸುತ್ತಮುತ್ತಲಿನ ಗ್ರಾಮದ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಬೇಕೆಂದು ಯರಗೇರಾ ಗ್ರಾಮ ಪಂಚಾಯತ್​ ಅಧ್ಯಕ್ಷೆ ಮಂಗಮ್ಮ ನೇತೃತ್ವದಲ್ಲಿ ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಮನವಿ ಸಲ್ಲಿಸಿದರು.

ಗ್ರಾಮಸ್ಥರಿಗೆ ಉದ್ಯೋಗ ಕಲ್ಪಿಸುವಂತೆ ಮನವಿ
author img

By

Published : May 29, 2019, 8:05 PM IST

ರಾಯಚೂರು: ಪ್ರಸಕ್ತ ಸಾಲಿನಿಂದ ನೂತನವಾಗಿ ಆರಂಭವಾಗಲಿರುವ ರಾಯಚೂರು ವಿಶ್ವವಿದ್ಯಾಲಯದಲ್ಲಿ ಯರಗೇರಾ ಹಾಗೂ ಸುತ್ತಮುತ್ತಲಿನ ಗ್ರಾಮದ ಯುವಕ, ಯುವತಿಯರಿಗೆ ಉದ್ಯೋಗ ಕಲ್ಪಿಸಬೇಕೆಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಕುರಿತು ತಾಲೂಕಿನ ಯರಗೇರಾ ಗ್ರಾಮ ಪಂಚಾಯತ್​ ಅಧ್ಯಕ್ಷೆ ಮಂಗಮ್ಮ ನೇತೃತ್ವದಲ್ಲಿ ಗ್ರಾ.ಪಂ ಸದಸ್ಯರು ಹಾಗೂ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಇಂದು ಮನವಿ ಸಲ್ಲಿಸಿದರು.

ಗ್ರಾಮಸ್ಥರಿಗೆ ಉದ್ಯೋಗ ಕಲ್ಪಿಸುವಂತೆ ಮನವಿ

ರಾಯಚೂರು ಸ್ನಾತಕೋತ್ತರ ಕೇಂದ್ರಕ್ಕೆ 30 ವರ್ಷಗಳ ಹಿಂದೆ ಯರಗೇರಾ ಗ್ರಾಮ ಪಂಚಾಯತ್​ ವ್ಯಾಪ್ತಿಯ ಜನರಿಂದ ಸುಮಾರು 250 ಎಕರೆ ಜಮೀನು ಪಡೆಯಲಾಗಿದೆ. ಈಗ ಇದನ್ನು ವಿಶ್ವವಿದ್ಯಾಲಯವನ್ನಾಗಿ ಮಾಡುತ್ತಿರುವುದು ಶ್ಲಾಘನೀಯ.

ಇನ್ನೇನು ವಿವಿ ಅರಂಭವಾಗಲಿದ್ದು, ಇದಕ್ಕೆ ಸುತ್ತಮುತ್ತಲಿನ ಗ್ರಾಮದ ಅರ್ಹ ಯುವಕ, ಯುವತಿಯರಿಗೆ ಸಿ ಮತ್ತು ಡಿ ವೃಂದದ ಉದ್ಯೋಗ ನೇಮಕಾತಿಗೆ ಅವಕಾಶ ಮಾಡಿಕೊಡಬೇಕು. ಆ ಮೂಲಕ ಈ ಭಾಗದ ಅಭಿವೃದ್ಧಿಗೆ ಸಹಕರಿಸಬೇಕು ಎಂದು ಮನವಿ ಮಾಡಿದರು.

For All Latest Updates

TAGGED:

ABOUT THE AUTHOR

...view details