ಮೈಸೂರು: ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಇನ್ನೂ ಕೆಲವೇ ದಿನಗಳು ಬಾಕಿಯಿದ್ದು, ಸಾಂಸ್ಕೃತಿಕ ನಗರಿ ಮೈಸೂರು ಸಜ್ಜಾಗುತ್ತಿದೆ. ಈಗಾಗಲೇ ಯೋಗಾಪಟುಗಳು ಭರ್ಜರಿಯಾಗಿ ತಾಲೀಮು ನಡೆಸುತ್ತಿದ್ದಾರೆ.
ಅಂತಾರಾಷ್ಟ್ರೀಯ ಯೋಗ ದಿನಾಚರಣೆಗೆ ಸಿದ್ಧತೆ: ಅರಮನೆ ಅಂಗಳದಲ್ಲಿ ಭರ್ಜರಿ ತಾಲೀಮು - Etv bharatha
ಅಂತಾರಾಷ್ಟ್ರೀಯ ಯೋಗ ದಿನಕ್ಕೆ ಮೈಸೂರಲ್ಲಿ ಭರ್ಜರಿ ತಾಲೀಮು. ಮೈಸೂರಿನ ಅರಮನೆ ಆವರಣದಲ್ಲಿ ಯೋಗ ಪಟುಗಳು ಯೋಗಾಭ್ಯಾಸ ಮಾಡುವ ಮೂಲಕ ಯೋಗ ದಿನಕ್ಕೆ ತಯಾರಾಗುತ್ತಿದ್ದಾರೆ.
ಯೋಗ ತಾಲೀಮು
ಜಿಲ್ಲಾಡಳಿತ ಹಾಗೂ ಯೋಗ ಫೆಡರೇಷನ್ ಆಫ್ ಮೈಸೂರು ಟ್ರಸ್ಟ್ ವತಿಯಿಂದ ಅರಮನೆ ಆವರಣದಲ್ಲಿ ಏರ್ಪಡಿಸಿದ್ದ ಎರಡನೇ ತಾಲೀಮಿನಲ್ಲಿ ಮೂರು ಸಾವಿರಕ್ಕೂ ಅಧಿಕ ಯೋಗಪಟುಗಳು ಭಾಗವಹಿಸಿ ಯೋಗಾಭ್ಯಾಸ ಮಾಡಿದರು.
ಪ್ರಾರ್ಥನೆ, ಚಾಲನಾ ಕ್ರಿಯೆ, ಆಸನಗಳು, ಪ್ರಾಣಾಯಾಮ, ಧ್ಯಾನ, ಸಂಕಲ್ಪ, ಶಾಂತಿ-ಮಂತ್ರ, ಪೂರ್ವಾಭಾಸ್ಯ ಕ್ರಿಯೆಯೊಂದಿಗೆ ಯೋಗ ತಾಲೀಮು ಮುಕ್ತಗೊಳಿಸಲಾಯಿತು. ಪತಂಜಲಿ ಯೋಗ ಶಿಕ್ಷಣ ಸಂಸ್ಥೆ, ಮೈಸೂರು ಯೋಗ ಒಕ್ಕೂಟ, ಯೋಗ ಸ್ಪೋರ್ಟ್ಸ್ ಸೇರಿದಂತೆ ವಿವಿಧ ಸಂಘಟನೆಗಳು ಭಾಗಿಯಾಗಿದ್ದವು.