ಉಡುಪಿ: ಜಿಲ್ಲೆಯ ಕುಂದಾಪುರ ತಾಲೂಕಿನ ಕವ್ರಾಡಿ ಗ್ರಾಮದ ಯುವಕನೋರ್ವನ ಶವ ಮಂಗಳೂರಿನ ಪಣಂಬೂರ್ ಬೀಚ್ ನಲ್ಲಿ ಪತ್ತೆಯಾಗಿದೆ.
ಕುಂದಾಪುರದ ಯುವಕ ಪಣಂಬೂರಿನ ಬೀಚ್ನಲ್ಲಿ ಶವವಾಗಿ ಪತ್ತೆ! - Manglure panamburu beach
ಕುಂದಾಪುರ ತಾಲೂಕಿನ ಕವ್ರಾಡಿ ಗ್ರಾಮದ ಮಾನಸಿಕ ಅಸ್ವಸ್ಥನೊಬ್ಬನ ಶವ ಪಣಂಬೂರ್ ಬೀಚ್ ನಲ್ಲಿ ಪತ್ತೆಯಾಗಿದೆ.
ಹರೀಶ್ ಕುಲಾಲ್ (30) ಎನ್ನುವ ಯುವಕ ಕೆಲವು ದಿನಗಳಿಂದ ಕಾಣೆಯಾಗಿದ್ದ. ಸಾಮಾಜಿಕ ಜಾಲತಾಣದಲ್ಲಿ ಈತ ಕಾಣೆಯಾದ ಕುರಿತು ಪೋಸ್ಟ್ ಗಳನ್ನು ಹಾಕಲಾಗಿತ್ತು. ಜೊತೆಗೆ ಯುವಕನ ಕುರಿತು ಮಾಹಿತಿ ಸಿಕ್ಕಿದ್ದಲ್ಲಿ ಸಂಬಂಧಪಟ್ಟ ಪೊಲೀಸ್ ಠಾಣೆಗೆ ತಿಳಿಸುವಂತೆ ಕೋರಲಾಗಿತ್ತು.
ಇದೀಗ ಯುವಕನ ಶವ ಮಂಗಳೂರಿನ ಪಣಂಬೂರ್ ಬೀಚ್ ನಲ್ಲಿ ಪತ್ತೆಯಾಗಿದೆ. ಮಾನಸಿಕ ಅಸ್ವಸ್ಥನಾಗಿದ್ದ ಈತ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗಿದೆ. ಈಗಾಗಲೇ ಮಂಗಳೂರು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಯುವಕನ ಆಧಾರ್ ಕಾರ್ಡ್ ಮತ್ತು ವೋಟರ್ ಐಡಿ ಹಿನ್ನೆಲೆಯಲ್ಲಿ ಸಂಬಂಧಪಟ್ಟವರಿಗೆ ಮಾಹಿತಿ ನೀಡಿದ್ದಾರೆ.