ಮುಂಬೈ:2000ನೇ ಇಸ್ವಿಯಲ್ಲಿ ಟೀಂ ಇಂಡಿಯಾ ತಂಡಕ್ಕೆ ಎಂಟ್ರಿ ಕೊಟ್ಟಿದ್ದ ಸಿಕ್ಸರ್ಗಳ ಸರದಾರ ಯುವರಾಜ್ ಸಿಂಗ್ ಬರೋಬ್ಬರಿ 19 ವರ್ಷಗಳ ಬಳಿಕ ತಮ್ಮ ಕ್ರಿಕೆಟ್ ವೃತ್ತಿ ಬದುಕಿಗೆ ಭಾವುಕರಾಗಿ ವಿದಾಯ ಘೋಷಣೆ ಮಾಡಿದ್ದಾರೆ.
ಕೀನ್ಯಾ ವಿರುದ್ಧ ಏಕದಿನ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದ ಯುವಿ ಒಟ್ಟು 304 ಏಕದಿನ ಪಂದ್ಯಗಳಲ್ಲಿ 8,701 ರನ್ ಸಿಡಿಸಿದ್ದು, 2017ರಲ್ಲಿ ವೆಸ್ಟ್ ಇಂಡೀಸ್ ಪ್ರವಾಸವೇ ಅವರ ಕೊನೆ ಏಕದಿನ ಪಂದ್ಯ. 2003ರಲ್ಲಿ ನ್ಯೂಜಿಲೆಂಡ್ ವಿರುದ್ಧ ಟೆಸ್ಟ್ ಕ್ರಿಕೆಟ್ಗೆ ಪಾದಾರ್ಪಣೆ ಮಾಡಿದ್ದು, 40 ಪಂದ್ಯಗಳಲ್ಲಿ 1,900 ರನ್ ಗಳಿಸಿದ್ದಾರೆ. 2007ರಲ್ಲಿ ಮೊದಲ ಟಿ-20 ಕ್ರಿಕೆಟ್ ಪಂದ್ಯವನ್ನು ಸ್ಕಾಟ್ಲ್ಯಾಂಡ್ ವಿರುದ್ಧ ಆಡಿದ್ದು, ಇದುವರೆಗೂ 58 ಪಂದ್ಯಗಳಿಂದ 1,177 ರನ್ ಸಿಡಿಸಿದ್ದಾರೆ. ಉಳಿದಂತೆ ಲೆಗ್ ಸ್ಪಿನ್ ಬೌಲರ್ ಆಗಿ ಟೆಸ್ಟ್, ಏಕದಿನ, ಟಿ-20 ಮಾದರಿಯಲ್ಲಿ ಕ್ರಮವಾಗಿ 9, 111, 28 ವಿಕೆಟ್ ಪಡೆದಿದ್ದಾರೆ.