ಗಂಗಾವತಿ:ಜಿಲ್ಲಾ ಪಂಚಾಯಿತಿ ಇಂಜಿನಿಯರಿಂಗ್ ಉಪ ವಿಭಾಗದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿ.ಪಂ. ಸಿಇಒ ಆದೇಶ ಮಾಡಿ ಮೂರು ದಿನ ಕಳೆದರೂ ಇದುವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.
ದಾಖಲಾಗದ ಕ್ರಿಮಿನಲ್ ಮೊಕದ್ದಮೆ: ಜಾರಿಯಾಗದ ಸಿಇಒ ಆದೇಶ - Gangavati latest news
ಜಿಲ್ಲಾ ಪಂಚಾಯಿತಿ ಎಂಜಿನಿಯರಿಂಗ್ ಉಪ ವಿಭಾಗದ ಅಧಿಕಾರಿಗಳ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿ.ಪಂ. ಸಿಇಒ ಆದೇಶ ಮಾಡಿ ಮೂರು ದಿನ ಕಳೆದರೂ ಇದುವರೆಗೆ ಪೊಲೀಸ್ ಠಾಣೆಯಲ್ಲಿ ಯಾವುದೇ ದೂರು ದಾಖಲಾಗಿಲ್ಲ ಎಂಬ ಆರೋಪ ಕೇಳಿ ಬಂದಿದೆ.
Gangavati
ಲೆಕ್ಕಾಧಿಕಾರಿ ನಾರಾಯಣಸ್ವಾಮಿ, ಪ್ರಭಾರಿ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ಎಸ್.ಡಿ. ನಾಗೋಡ್ ಹಾಗೂ ಕಿರಿಯ ಇಂಜಿನಿಯರ್ ಡಿ.ಎಂ. ರವಿ ವಿರುದ್ಧ ಕ್ರಿಮಿನಲ್ ಮೊಕದ್ದಮೆ ದಾಖಲಿಸುವಂತೆ ಜಿಲ್ಲಾ ಪಂಚಾಯಿತಿ ಸಿಇಒ ರಘುನಂದನ್ ಮೂತರ್ ಆದೇಶ ಮಾಡಿದ್ದರು.
ಆದರೆ ಕಾಮಗಾರಿಗಳ ಅಕ್ರಮ ಮೂರು ಠಾಣೆಯ ವ್ಯಾಪ್ತಿಯಲ್ಲಿ ನಡೆದಿದ್ದು, ಪ್ರತ್ಯೇಕವಾಗಿ ದೂರು ದಾಖಲಿಸುವಂತೆ ಪೊಲೀಸರು ಸಲಹೆ ನೀಡಿದ್ದಾರೆ ಎನ್ನಲಾಗಿದೆ. ಹೀಗಾಗಿ ಕನಕಗಿರಿ, ಕಾರಟಗಿ ಮತ್ತು ಗಂಗಾವತಿ ಗ್ರಾಮೀಣ ಠಾಣೆಯಲ್ಲಿ ದೂರು ದಾಖಲಿಸಲು ಅಧಿಕಾರಿಗಳು ಚಿಂತನೆ ನಡೆಸಿದ್ದಾರೆ.