ನವದೆಹಲಿ:ಕೋವಿಡ್ ಲಾಕ್ಡೌನ್ ಸಮಯದಲ್ಲಿ ಮುಂದೂಡಲ್ಪಟ್ಟ ಇಎಂಐಗಳ ಮೇಲಿನ ಚಕ್ರಬಡ್ಡಿ ಮನ್ನಾ ಮಾಡುವ ನಿರ್ಧಾರವು ಮುಂದುವರೆದ ಹಂತದಲ್ಲಿದ್ದು, ಎರಡು ಅಥವಾ ಮೂರು ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್‌ಗೆ ತಿಳಿಸಿದೆ.
ಚಕ್ರಬಡ್ಡಿ ಮನ್ನಾ ಕುರಿತ ನಿರ್ಧಾರದ ಕುರಿತು ಸುಪ್ರೀಂಗೆ ಮಾಹಿತಿ ನೀಡಿದ ಕೇಂದ್ರ ಸರ್ಕಾರ
ಇಎಂಐ ಮರುಪಾವತಿ ಅವಧಿ ವಿಸ್ತರಣೆ, ಇಎಂಐಗಳ ಮೇಲಿನ ಚಕ್ರಬಡ್ಡಿ ಕುರಿತಂತೆ ಎರಡು ಅಥವಾ ಮೂರು ದಿನಗಳಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಸುಪ್ರೀಂ ಕೋರ್ಟ್‌ಗೆ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್
ಇಎಂಐ ಮರುಪಾವತಿ ಅವಧಿ ವಿಸ್ತರಣೆ, ಇಎಂಐಗಳ ಮೇಲಿನ ಚಕ್ರಬಡ್ಡಿ ಕುರಿತಂತೆ ನಿರ್ಧಾರ ತೆಗೆದುಕೊಳ್ಳಲು ತಜ್ಞರ ಸಮಿತಿಯೊಂದನ್ನು ರಚಿಸುವುದಾಗಿ ಈ ಹಿಂದೆ ನಡೆದ ವಿಚಾರಣೆ ವೇಳೆ ಕೇಂದ್ರ ಸುಪ್ರೀಂಗೆ ತಿಳಿಸಿತ್ತು.
ಇಂದಿನ ವಿಚಾರಣೆಯಲ್ಲಿ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಎರಡು ಅಥವಾ ಮೂರು ದಿನಗಳಲ್ಲಿ ಈ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ನ್ಯಾ. ಅಶೋಕ್ ಭೂಷಣ್ ನೇತೃತ್ವದ ನ್ಯಾಯಪೀಠಕ್ಕೆ ಮಾಹಿತಿ ನೀಡಿದ್ದಾರೆ. ಮುಂದಿನ ವಿಚಾರಣೆಯನ್ನು ಅಕ್ಟೋಬರ್ 5ಕ್ಕೆ ಮುಂದೂಡಲಾಗಿದೆ.