ಕರ್ನಾಟಕ

karnataka

ETV Bharat / business

ಕ್ರಿಪ್ಟೋಕರೆನ್ಸಿ ಪರಿಶೀಲಿಸಲು ಸಮಿತಿ ರಚಿಸಲಾಗಿದೆ: ಸಚಿವ ಅನುರಾಗ್ ಠಾಕೂರ್ - ಕ್ರಿಪ್ಟೋಕರೆನ್ಸಿ ಪರಿಶೀಲಿಸಲು ಉನ್ನತ ಮಟ್ಟದ ಸಮಿತಿ ರಚನೆ

ಬ್ಲಾಕ್‌ಚೈನ್ ಒಂದು ಹೊಸ ಉದಯೋನ್ಮುಖ ತಂತ್ರಜ್ಞಾನವಾಗಿದೆ. ಕ್ರಿಪ್ಟೋಕರೆನ್ಸಿ ಡಿಜಿಟಲ್ ಕರೆನ್ಸಿಯ ಒಂದು ರೂಪವಾಗಿದೆ. ನಾವು ಯಾವಾಗಲೂ ಹೊಸ ಆಲೋಚನೆಗಳನ್ನು ಮುಕ್ತ ಮನಸ್ಸಿನಿಂದ ಮೌಲ್ಯಮಾಪನ ಮಾಡಬೇಕು, ಅನ್ವೇಷಿಸಬೇಕು ಮತ್ತು ಪ್ರೋತ್ಸಾಹಿಸಬೇಕು ಎಂದು ಅನುರಾಗ್ ಠಾಕೂರ್ ಹೇಳಿದರು.

anurag thakur
anurag thakur

By

Published : Mar 6, 2021, 7:20 PM IST

ಚಂಡೀಗಢ (ಪಂಜಾಬ್):ಭಾರತದಲ್ಲಿ ಬಿಟ್‌ಕಾಯಿನ್‌ಗಳು ಮತ್ತು ಇತರ ರೀತಿಯ ವರ್ಚುಯಲ್ ಕರೆನ್ಸಿಗಳು ಹೆಚ್ಚುತ್ತಿದ್ದು, ಈ ಕುರಿತು ಸರ್ಕಾರವು ಉನ್ನತ ಮಟ್ಟದ ಸಮಿತಿ ರಚನೆ ಮಾಡಿದೆ ಎಂದು ಹಣಕಾಸು ಮತ್ತು ಕಾರ್ಪೊರೇಟ್ ವ್ಯವಹಾರಗಳ ರಾಜ್ಯ ಸಚಿವ ಅನುರಾಗ್ ಠಾಕೂರ್ ಹೇಳಿದ್ದಾರೆ.

ಉನ್ನತ ಮಟ್ಟದ ಸಮಿತಿಯು ಕ್ರಿಪ್ಟೋಕರೆನ್ಸಿ ಪರಿಶೀಲಿಸಲಿದ್ದು, ಅದರ ಶಿಫಾರಸುಗಳ ಆಧಾರದ ಮೇಲೆ ಸರ್ಕಾರವು ಸಂಸತ್ತಿನಲ್ಲಿ ಶಾಸಕಾಂಗ ಪ್ರಸ್ತಾವನೆ ಮಂಡಿಸಬಹುದಾಗಿದೆ.

"ಬ್ಲಾಕ್‌ಚೈನ್ ಒಂದು ಹೊಸ ಉದಯೋನ್ಮುಖ ತಂತ್ರಜ್ಞಾನವಾಗಿದೆ. ಕ್ರಿಪ್ಟೋಕರೆನ್ಸಿ ಡಿಜಿಟಲ್ ಕರೆನ್ಸಿಯ ಒಂದು ರೂಪವಾಗಿದೆ. ನಾವು ಯಾವಾಗಲೂ ಹೊಸ ಆಲೋಚನೆಗಳನ್ನು ಮುಕ್ತ ಮನಸ್ಸಿನಿಂದ ಮೌಲ್ಯಮಾಪನ ಮಾಡಬೇಕು, ಅನ್ವೇಷಿಸಬೇಕು ಮತ್ತು ಪ್ರೋತ್ಸಾಹಿಸಬೇಕು ಎಂದು ನಾನು ದೃಢವಾಗಿ ನಂಬುತ್ತೇನೆ" ಎಂದು ಕ್ರಿಪ್ಟೋಕರೆನ್ಸಿಯ ಕುರಿತು ಅನುರಾಗ್ ಠಾಕೂರ್ ಅಭಿಪ್ರಾಯ ವ್ಯಕ್ತಪಡಿಸಿದರು.

ಕ್ರಿಪ್ಟೋಕರೆನ್ಸಿಯನ್ನು ಭಾರತದಲ್ಲಿ ಕಾನೂನುಬದ್ಧ ಮತ್ತು ಕಾನೂನು ಟೆಂಡರ್ ಆಗಿ ಸ್ವೀಕರಿಸಲು ಕೇಂದ್ರ ಸರ್ಕಾರವು ಉನ್ನತ ಮಟ್ಟದ ಸಮಿತಿಯನ್ನು ರಚಿಸಿದೆ ಎಂದು ಅವರು ಹೇಳಿದರು.

ABOUT THE AUTHOR

...view details