ಕರ್ನಾಟಕ

karnataka

ETV Bharat / business

ಹೆಚ್ಚುತ್ತಿರುವ ಜನಸಂಖ್ಯೆಗೆ ಅನುಗುಣವಾಗಿ ದೇಶಕ್ಕೆ ಮತ್ತೊಂದು ಹಸಿರು ಕ್ರಾಂತಿಯ ಅವಶ್ಯವಿದೆ: ಕೇಂದ್ರ ಸಚಿವ

2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರ ಬದ್ಧವಾಗಿದೆ. ಈ ಗುರಿಯನ್ನು ಸಾಧಿಸಲು ಹದಿನಾರು ಅಂಶಗಳ ಕಾರ್ಯಸೂಚಿಯನ್ನು ಸರ್ಕಾರ ಬಜೆಟ್​ನಲ್ಲಿ ಘೋಷಿಸಿದೆ. ಹೆಚ್ಚುತ್ತಿರುವ ಜನಸಂಖ್ಯೆಯ ದೃಷ್ಟಿಯಿಂದ ಆಹಾರ ಧಾನ್ಯ ಪೂರೈಕೆ ಹೆಚ್ಚಿಸಲು ಎರಡನೇ ಹಸಿರು ಕ್ರಾಂತಿಯ ಅವಶ್ಯಕತೆಯಿದೆ ಎಂದು ಕೇಂದ್ರ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

Narendra Singh Tomar
ನರೇಂದ್ರ ಸಿಂಗ್ ತೋಮರ್

By

Published : Jul 6, 2020, 10:13 PM IST

ನವದೆಹಲಿ: ಆಹಾರ ಧಾನ್ಯಗಳ ಉತ್ಪಾದನೆ ಹೆಚ್ಚಿಸಲು ದೇಶಕ್ಕೆ ಮತ್ತೊಂದು ಹಸಿರು ಕ್ರಾಂತಿಯ ಅಗತ್ಯವಿದೆ ಎಂದು ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ ರಾಜ್ ಸಚಿವ ನರೇಂದ್ರ ಸಿಂಗ್ ತೋಮರ್ ಹೇಳಿದ್ದಾರೆ.

ಜಾರ್ಖಂಡ್‌ನ ಹಜಾರಿಬಾಗ್‌ನಲ್ಲಿ ಭಾರತೀಯ ಕೃಷಿ ಸಂಶೋಧನಾ ಸಂಸ್ಥೆಯ (ಐಎಆರ್‌ಐ) ಹೊಸದಾಗಿ ನಿರ್ಮಿಸಿದ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿದ ತೋಮರ್, 2022ರ ವೇಳೆಗೆ ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರ ಬದ್ಧವಾಗಿದೆ. ಈ ಗುರಿಯನ್ನು ಸಾಧಿಸಲು ಹದಿನಾರು ಅಂಶಗಳ ಕಾರ್ಯಸೂಚಿಯನ್ನು ಸರ್ಕಾರ ಬಜೆಟ್​ನಲ್ಲಿ ಘೋಷಿಸಿದೆ ಎಂದರು.

ಹೆಚ್ಚುತ್ತಿರುವ ಜನಸಂಖ್ಯೆಯ ದೃಷ್ಟಿಯಿಂದ ಆಹಾರ ಧಾನ್ಯ ಪೂರೈಕೆ ಹೆಚ್ಚಿಸಲು ಎರಡನೇ ಹಸಿರು ಕ್ರಾಂತಿಯ ಅವಶ್ಯಕತೆಯಿದೆ. ಜಾರ್ಖಂಡ್ ಸೇರಿದಂತೆ ಈಶಾನ್ಯ ರಾಜ್ಯಗಳಲ್ಲಿ ಈ ಕ್ರಾಂತಿಯನ್ನು ತರಲು ಅಪಾರ ಸಾಮರ್ಥ್ಯವಿದೆ ಎಂದು ಹೇಳಿದರು.

ದೇಶದ ಏಕತೆ ಮತ್ತು ಸಮಗ್ರತೆಗಾಗಿ ತಮ್ಮ ಜೀವನವನ್ನೇ ಮುಡಿಪಾಗಿಟ್ಟಿರುವ ಮತ್ತು ಒಂದು ದೇಶ, ಒಂದು ಶಾಸನದ ಬಗ್ಗೆ ಜಾಗೃತಿ ಮೂಡಿಸಿ ಕಾಶ್ಮೀರದಲ್ಲಿ ತಮ್ಮ ಪ್ರಾಣ ತ್ಯಾಗ ಮಾಡಿದ ಡಾ. ಶ್ಯಾಮ್​ ಪ್ರಸಾದ್ ಮುಖರ್ಜಿ ಅವರ ಜನ್ಮದಿನ ಇಂದು. ಅವರಿಗಾಗಿ ಈ ಕಟ್ಟಡ ಅರ್ಪಿಸುತ್ತಿದ್ದೇವೆ ಎಂದರು.

ಕೃಷಿ ಮತ್ತು ಕೃಷಿ ಸಂಬಂಧಿತ ಚಟುವಟಿಕೆಗಳು, ನೀರಾವರಿ ಮತ್ತು ಗ್ರಾಮೀಣಾಭಿವೃದ್ಧಿಗೆ 2020-21ರ ಬಜೆಟ್‌ನಲ್ಲಿ ಸರ್ಕಾರವು 2.83 ಲಕ್ಷ ಕೋಟಿ ರೂ. ಮೀಸಲಿಟ್ಟಿದೆ. ಇದು ಇಲ್ಲಿಯವರೆಗೆ ಕೃಷಿ ಕ್ಷೇತ್ರಕ್ಕೆ ನೀಡಿದ ಅತಿ ಹೆಚ್ಚಿನ ಹಂಚಿಕೆಯಾಗಿದೆ ಎಂದು ಕೇಂದ್ರ ಸಚಿವರು ಹೇಳಿದರು.

ABOUT THE AUTHOR

...view details